ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಎರಡು ಬೈಕುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ...
ಅಪಘಾತ(ಸಾಂದರ್ಭಿಕ ಚಿತ್ರ)
ಅಪಘಾತ(ಸಾಂದರ್ಭಿಕ ಚಿತ್ರ)
Updated on: 

ಪಂತಹಳ್ಳಿ(ಮಂಡ್ಯ): ಎರಡು ಬೈಕುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ಪಂತಹಳ್ಳಿ ಗ್ರಾಮದ ಬಳಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ದುರ್ಘಟನೆ ಸಂಭವಿಸಿದೆ.  ಪರಿಣಾಮ ಲತೀಫ್(50), ವಜೀರ್ ಖಾನ್(55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com