
ಕೃಷ್ಣರಾಜಪುರ: ಕಾಡುಗೋಡಿ ಪ್ಲಾಂಟೇಶನ್ ನ ಸರ್ವೆ. ನಂ.1 ದಿನ್ನೂರು ಗ್ರಾಮಸ್ಥರು ಬೃಹತ್ ಕಾಲ್ನಡಿಗೆ ಜಾಥಾ ನಡೆಸಿ ತಹಸೀಲ್ದಾರ್ ಹರೀಶ್ ನಾಯ್ಕ್ ಗೆ ಮನವಿ ಪತ್ರ ಸಲ್ಲಿಸಿದರು.
ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿಯ ಕಾಡುಗೋಡಿ ಪ್ಲಾಂಟೇಶನ್ ಗ್ರಾಮದಲ್ಲಿ ಶೇ.100 ದಲಿತ ಕುಟುಂಬಗಳು ಸುಮಾರು 65ವರ್ಷಗಳಿಂದ ಇಲ್ಲಿಯೇ ಇದ್ದಾರೆ. ಎರಡು ಸಾವಿರಕ್ಕೂ ಹೆಚ್ಚು ಮನೆಗಳಿವೆ. 5000ಕ್ಕೂ ಹೆಚ್ಚ ಜನಸಂಖ್ಯೆ ಇದೆ. ಇಷ್ಟೆಲ್ಲಾ ಇದ್ದರೂ ಜನರನ್ನು ಖಾಲಿ ಮಾಡಿಸುವ ಉದ್ದೇಶವೇನು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಹರೀಶ್ ನಾಯಕ್, ದಿನ್ನೂರು ಗ್ರಾಮಸ್ಥರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ ಗ್ರಾಮಸ್ಥರ ಸಮ್ಮುಖದಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸಭೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಸೂಕ್ತ ದಾಖಲೆಗಳನ್ನು ಒದಗಿಸಲಾಗುವುದು ಎಂದರು.
ಅತಂತ್ರರಿಗೆ ಪುನರ್ವಸತಿ
ಬೆಂಗಳೂರು: ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಅತಂತ್ರರಾಗಿರುವ ಅಮಾಯಕರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿಯೊಂದಿಗೆ ಚರ್ಚಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದ ಆದೇಶದಂತೆ ಕೆರೆ ಒತ್ತುವರಿ ತೆರವು ಮಾಡುವುದು ಅನಿವಾರ್ಯವಾಗಿತ್ತು. ಅನೇಕ ಅಮಾಯಕರು ಜಾಗ ಖರೀದಿಸಿ ಮನೆ ಕಟ್ಟಿದ್ದಾರೆ. ಈಗ ತೆರವು ಕಾರ್ಯಾಚರಣೆಯಿಂದ ಅತಂತ್ರ ರಾಗಿದ್ದಾರೆ. ಇಂಥವರನ್ನು ಗುರುತಿಸಿ ಪುನರ್ವಸತಿ ಕಲ್ಪಿಸಬೇಕು. ಅಮಾಯಕರಿಗೆ ಮೋಸ ಎಸಗಿದವರ (ಜಾಗ ಮಾರಿದವರು) ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೆಯೇ ತಪ್ಪಿತಸ್ಥ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದರು.
Advertisement