
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಬಿಜೆಪಿ ಸನ್ನದಟಛಿವಾಗಿದ್ದು, ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಕಟ್ಟುವುದಕ್ಕೆ 30 ತಂಡಗಳ ಪಟ್ಟಿ ಸಿದ್ಧವಾಗಿದೆ ಎಂದು
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಈಗಾಗಲೇ ಚುನಾವಣೆ ನಡೆಯ ಲಿರುವ 5,844 ಗ್ರಾಮ ಪಂಚಾಯ್ತಿಗಳಿಗೆ ತಲಾ ಒಬ್ಬರು ಪ್ರಭಾರಿ ಮತ್ತು ಸಹಪ್ರಭಾರಿ ನೇಮಕ ಮÁಡಲಾಗಿದೆ' ಎಂದರು.
ಪ್ರತಿ ವಿಧಾನಸಭಾ ಕ್ಷೇತ್ರದಿಂದ 4 ರಿಂದ 5 ಪ್ರಮುಖರನ್ನು ಕರೆಸಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮೇ. 8 ರಿಂದ 15ರವರೆಗೆ ಸಮಾವೇಶ ನಡೆಸುತ್ತೇವೆ. ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ ಮಾಡಿ ಜನಪರ ಕಾರ್ಯಕ್ರಮಗಳು ಮತ್ತು ಈಗಿನ ಕೇಂದ್ರ ಸರ್ಕಾರದ ಯೋಜಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಈ ಬಾರಿಯ ಗ್ರಾಮ ಪಂಜಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯ್ಲಿಲ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಮೀಸಲು ಪಟ್ಟಿ ಪ್ರಕಟಿಸಲಿ:
ಗ್ರಾಮ ಪಂಚಾಯ್ತಿಗಳಿಗೆ ಚುನಾವಣಾ ವೇಳಾ ಪಟ್ಟಿ ಘೋಷಣೆ ಆಗಿದ್ದರೂ, ರಾಜ್ಯ ಸರ್ಕಾರ ಮೀಸಲು ಪಟ್ಟಿ ಪ್ರಕಟಿಸಿಲ್ಲ. ಈ ಬಗ್ಗೆ ಸಾಕಷ್ಟು ಗೊಂದಲ ಇದೆ. ಹಾಗಾಗಿ ತಕ್ಷಣ ಮೀಸಲು ಪಟ್ಟಿ ಪ್ರಕಟಿಸಬೇಕು ಹಾಗೂ ಆಕ್ಷೇಪಣೆಗಳಿಗೆ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದರು
Advertisement