ಕೈಗಾರಿಕಾ ಅಭಿವೃದ್ಧಿಗೆ ಎಫ್ ಕೆಸಿಸಿಐ ಬೆಂಬಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ದೇಶದ ಅಭಿವೃದ್ಧಿಯಾಗಬೇಕಾದರೆ ಕೈಗಾರಿಕೆಗಳು ಬೆಳೆಯಬೇಕು. ಅದಕ್ಕೆ ಪೂರಕವಾದ ಬೆಂಬಲವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ) ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ದೇಶದ ಅಭಿವೃದ್ಧಿಯಾಗಬೇಕಾದರೆ ಕೈಗಾರಿಕೆಗಳು ಬೆಳೆಯಬೇಕು. ಅದಕ್ಕೆ ಪೂರಕವಾದ ಬೆಂಬಲವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ) ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ನಿಮ್ಹಾನ್ಸ್ ಕನ್‍ವೆನ್ಷನ್ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎಫ್ ಕೆಸಿಸಿಸಿಐ ಸದಸ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹೆಚ್ಚು ಹೆಚ್ಚು ಕೈಗಾರಿಕೆಗಳು ಬರುವುದರಿಂದ ಉದ್ಯೋಗಾವಕಾಶಗಳೂ ಹೆಚ್ಚುತ್ತವೆ. ಕೈಗಾರಿಕಾ ಕ್ಷೇತ್ರದಲ್ಲಿ ಇಂದು ಹಲವಾರು ಸಂಸ್ಥೆಗಳಿದ್ದು,  ಅವುಗಳಲ್ಲಿ ಮೊದಲ ಸ್ಥಾನವನ್ನು ವಾಣಿಜ್ಯ ಮಂಡಳಿಗೆ ನೀಡಬಹುದು. ವ್ಯಾಪಾರ ಮತ್ತು ಕೈಗಾರಿಕೆ ಬಗ್ಗೆ ಈ ಸಂಸ್ಥೆ ಪ್ರತಿ ತಿಂಗಳು ಸಭೆ ನಡೆಸಿ, ಅಗತ್ಯ ಸಲಹೆ, ಸೂಚನೆ ನೀಡುತ್ತಿದ್ದು, ಕೈಗಾರಿಕೆ ಬೆಳವಣಿಗೆಗೆ ಹೆಚ್ಚಿನ ಶ್ರಮ ವಹಿಸಿದೆ. ಇದಕ್ಕೆ ಸರ್ಕಾರದಿಂದ ಯಾವ ಸಹಕಾರ ಬೇಕಿದ್ದರೂ ನೀಡಲು ಸಿದ್ದವಿರುವುದಾಗಿ ತಿಳಿಸಿದರು.

ಎಫ್ ಕೆಸಿಸಿಐ ಅಧ್ಯಕ್ಷ ಸಂಪತ್‍ರಾಮನ್ ಮಾತನಾಡಿ, ಇದುವರೆಗೆ ಸಾಂಪ್ರದಾಯಿಕವಾಗಿದ್ದ ನಮ್ಮ ಸಂಸ್ಥೆಗೆ ಆಧುನಿಕತೆಯ ಸ್ಪರ್ಶ ನೀಡಲು ಮುಂದಾಗಿದ್ದೇವೆ. ಆ ಮೂಲಕ ತಂತ್ರಜ್ಞಾನ ಸಮರ್ಪಕ ಬಳಕೆಗೆ ಒತ್ತು ನೀಡಲಾಗುತ್ತಿದೆ. ಸರ್ ಎಂ. ವಿಶ್ವೇಶ್ವರಯ್ಯ ಅವರು 1916ರಲ್ಲಿ ಈ ಸಂಸ್ಥೆಯನ್ನು ಕಟ್ಟಿದರು. ಇದೀಗ ಸಂಸ್ಥೆ 99 ವರ್ಷ ಪೂರೈಸಿದ್ದು, ಸಾಧನೆಯ ಮೆಟ್ಟಿಲನ್ನು ಏರುತ್ತಿದೆ. ಹೀಗಾಗಿ ಅವರ ಹುಟ್ಟೂರಾದ ಮುದ್ದೇನಹಳ್ಳಿಯಲ್ಲಿ 100 ಶೌಚಾಲಯವನ್ನು ನಿರ್ಮಿಸುವ ಯೋಜನೆಯನ್ನು ನಮ್ಮ ಸಂಸ್ಥೆ ಹಾಕಿಕೊಂಡಿದೆ ಎಂದರು.

ತಲ್ಲಮ್ ಆರ್. ದ್ವಾರಕಾನಾಥ್, ಎಫ್ ಕೆಸಿಸಿಐ ಮುಖ್ಯಸ್ಥ ಎಂ.ಜಿ. ಬಾಲಕೃಷ್ಣ ಇದ್ದರು. ಸಮಾರಂಭಕ್ಕೂ ಮೊದಲು ನೃತ್ಯ, ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com