
ಬೆಂಗಳೂರು: ರಸ್ತೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಯೋಜನೆಗಳ ಅನುದಾನವನ್ನು ಇತರೆ ಯೋಜನೆಗಳಿಗಾಗಿ ಬಳಸಬಾರದು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ರಸ್ತೆ ಮೂಲಸೌಕರ್ಯ ವಿಭಾಗದ ಎಂಜಿನಿಯರ್‍ಗಳೊಂದಿಗೆ ಸಭೆ ನಡೆಸಿದ ಅವರು, ಬಿಬಿಎಂಪಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ನಡುವೆ ಅಂತರ ಕಾಪಾಡುವಂತೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ರಸ್ತೆ ಕಾಮಗಾರಿ ಯೋಜನೆಗಳಿಗೆ ಪ್ರತ್ಯೇಕ ಬಜೆಟ್ ಇರುವುದರಿಂದ ಬಿಬಿಎಂಪಿ ಯೋಜನೆಗಳ ಈ ಹಣವನ್ನು ಬಳಸಬಾರದು. ಈಗ ಹೊಸದಾಗಿ ಬಿಬಿಎಂಪಿಯಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಟೆಂಡರ್ ಕರೆದು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು.
ಆರ್ಟಿರಿ ಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದು, ಶೀಘ್ರವಾಗಿ ಕಾಮಗಾರಿ ಮುಗಿಸಬೇಕು. ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳಗಲ್ಲಿ ಯೋಜನೆಯ ಹೆಸರು, ಜಲಮಂಡಳಿ ಅಧಿಕಾರಿಗಳ ಜೊತೆ ಮಾತುಕತೆ ಕೆಲವು ಮುಖ್ಯರಸ್ತೆಗಳಲ್ಲಿ ಪೈಪ್‍ಲೈನ್ ಅಳವಡಿಸಲು ಜಲಮಂಡಳಿ ಅಧಿಕಾರಿಗಳು ರಸ್ತೆ ಅಗೆಯುತ್ತಿದ್ದಾರೆ.
ಕೆಲವೆಡೆ ರಸ್ತೆ ಅಗೆದು, ಮುಚ್ಚದೆ ಹಾಗೆಯೇ ಬಿಡುವುದರಿಂದ ವಾಹನ ದಟ್ಟಣೆ ಹೆಚ್ಚುತ್ತಿದೆ. ಪದೇ ಪದೇ ಗುಂಡಿ ತೋಡುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಭೆಯಲ್ಲಿದ್ದ ಸಂಚಾರಿ ಪೊಲೀಸ್ ಮುಖ್ಯಸ್ಥರು ಮನವಿ ಮಾಡಿದರು.
ರಸ್ತೆ ಅಗೆಯುವಾಗ ಎಚ್ಚರವಹಿಸು ವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೈಪ್‍ಲೈನ್ ಅಳವಡಿಸುವಂತೆ ಜಲ ಮಂಡಳಿ ಅಧಿಕಾರಿ ಗಳಿಗೆ ಸೂಚಿಸ ಲಾಗು ವುದು ಎಂದು ಆಡಳಿತಾಧಿಕಾರಿ ವಿಜಯಭಾಸ್ಕರ್ ಸಂಚಾರಿ ಪೊಲೀಸರಿಗೆ ತಿಳಿಸಿದರು.ಆಯುಕ್ತ ಜಿ.ಕುಮಾರ್ ನಾಯಕ್ ಸಭೆಯಲ್ಲಿ ಹಾಜರಿದ್ದರು.
Advertisement