ನಾಳೆ ಎಂ ಎಸ್ ರಾಮ್ಯಯ್ಯ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸಿಬಿಷನ್

ಎಂ.ಎಸ್ ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯ ಅಂತಿಮ ವರ್ಷದ ವಿದ್ಯಾರ್ಥಿಗಳು ಆವಿಷ್ಕರಿಸಿರುವ ವಿವಿಧ ತಾಂತ್ರಿಕ ವಸ್ತುಗಳ...
ಪತ್ರಿಕಾಗೋಷ್ಠಿ ನಡೆಸಿದ ಎಂ.ಎಸ್ ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯದ ಡಾ.ಲಿಂಗರಾಜು, ರಿಜ್ವಾನ್ ಮತ್ತಿತರರು.
ಪತ್ರಿಕಾಗೋಷ್ಠಿ ನಡೆಸಿದ ಎಂ.ಎಸ್ ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯದ ಡಾ.ಲಿಂಗರಾಜು, ರಿಜ್ವಾನ್ ಮತ್ತಿತರರು.

ಬೆಂಗಳೂರು: ಎಂ.ಎಸ್ ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯ ಅಂತಿಮ ವರ್ಷದ ವಿದ್ಯಾರ್ಥಿಗಳು ಆವಿಷ್ಕರಿಸಿರುವ ವಿವಿಧ ತಾಂತ್ರಿಕ ವಸ್ತುಗಳ ಪ್ರದರ್ಶನವನ್ನು ಮೇ 13 ಮತ್ತು 14ರಂದು ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಜಿ ರಾಘವೇಂದ್ರ, ಅಂತಿಮ ವರ್ಷದ ವಿದ್ಯಾರ್ಥಿಗಳು ಮಾಡಿರುವ ಪ್ರಾಜೆಕ್ಟ್ ವರ್ಕ್, ಅಂದರೆ ವಿವಿಧ ತಾಂತ್ರಿಕ ವಸ್ತುಗಳನ್ನು ಹೊಸದಾಗಿ ಆವಿಷ್ಕರಿಸಿದ್ದಾರೆ. ಇದನ್ನು ಪ್ರದರ್ಶನಕ್ಕೆ ಇಡಲಾಗುತ್ತಿದೆ. ಇದರಲ್ಲಿ ಸುಮಾರು 1300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಪ್ರದರ್ಶನ ಬೆಳಿಗೆ 9 ರಿಂದ ಸಂಜೆ 4.30ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರದರ್ಶನದಲ್ಲಿ ಡ್ರೋನ್, ಕನ್ನಡ ಮಾತಾಡೋ ರೋಬೋ ಸೇರಿದಂತೆ ವಿವಿಧ ತಾಂತ್ರಿಕ ವಸ್ತುಗಳು ಪ್ರದರ್ಶನಗೊಳ್ಳಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com