ಜಯಾ ನಿರ್ದೋಷಿ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಶಿಫಾರಸು

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೇರಿ ನಾಲ್ವರನ್ನು ಹೈಕೋರ್ಟ್ ನಿರ್ದೋಷಿ ಎಂದು ಆದೇಶ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ. ಆಚಾರ್ಯ...
ಸರ್ಕಾರಿ ಅಭಿಯೋಜಕ ಬಿ.ವಿ. ಆಚಾರ್ಯ
ಸರ್ಕಾರಿ ಅಭಿಯೋಜಕ ಬಿ.ವಿ. ಆಚಾರ್ಯ

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೇರಿ ನಾಲ್ವರನ್ನು ಹೈಕೋರ್ಟ್ ನಿರ್ದೋಷಿ ಎಂದು ಆದೇಶ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ. ಆಚಾರ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಮೇಲ್ಮನವಿ ಸಲ್ಲಿಸಲು ಇದು ಸೂಕ್ತ ಪ್ರಕರಣವಾಗಿರುವುದಾಗಿ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ಆಚಾರ್ಯ ತಿಳಿಸಿದ್ದಾರೆಾ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ, ಇಳವರಸಿ, ಶಶಿಕಲಾ ನಟರಾಜನ್, ಸುಧಾಕರನ್ ಅವರನ್ನು ಅಪರಾಧಿ ಎಂದು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ರು.130 ಕೋಟಿ ದಂಡ ವಿಧಿಸಿದ್ದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಯಲಲಿತಾ ಸೇರಿ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 11ರಂದು ವಿಶೇಷ ನ್ಯಾಯಪೀಠದ ನ್ಯಾ.ಸಿ.ಆರ್. ಕುಮಾರಸ್ವಾಮಿ ನಾಲ್ವರನ್ನು ನಿರ್ದೋಷಿ ಎಂದು ಆದೇಶ ನೀಡಿದ್ದರು. ಆದೇಶ ನೀಡಿದ ಮರು ದಿವಸ ಎಸ್‍ಪಿಪಿ ಬಿ.ವಿ.ಆಚಾರ್ಯ ಆದೇಶದಲ್ಲಿ ಉಲ್ಲೇಖಿಸಿರುವ ಲೆಕ್ಕಾಚಾರದಲ್ಲಿ ರು.13.50ಕೋಟಿ ವ್ಯತ್ಯಾಸ ಇರುವುದಾಗಿ ಪತ್ತೆ ಹಚ್ಚಿದ್ದರು. ಸದ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಇದು ಯೋಗ್ಯವಾದ ಪ್ರಕರಣ ಆಗಿರುವುದಾಗಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಬೇಕೇ ಬೇಡವೇ ಎನ್ನುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಪ್ರಕರಣದ ಬಗ್ಗೆ ಕಾನೂನು ಇಲಾಖೆ ಕಾರ್ಯದರ್ಶಿ, ಅಡ್ವೋಕೇಟ್ ಜನರಲ್ ಮತ್ತು ವಿಶೇಷ ಅಭಿಯೋಜಕರ ಜತೆ ಚರ್ಚಿಸುತ್ತಿದೆ. ಇವರೆಲ್ಲಾ ನೀಡುವ ಸಲಹೆಗಳನ್ನು ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ.

-ಸಿದ್ದರಾಮಯ್ಯ, ಮುಖ್ಯಮಂತ್ರಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com