

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆ ಅಬ್ಬರ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ.
ಲಕ್ಷದ್ವೀಪ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದ್ದು, ಮೂರು ದಿನ ಮುಂದುವರಿಯಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹನಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಸುತ್ತಮುತ್ತ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಲಕ್ಷದ್ವೀಪ ಭಾಗದಲ್ಲಿ ಉಂಟಾಗಿರುವ ವಾಯುಭಾರ ವ್ಯತ್ಯಾಸದಿಂದಾಗಿ ರಾಜ್ಯದೆಲ್ಲೆಡೆ ಮಳೆಯಾಗುತ್ತಿದೆ. ಈ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ. ನಂತರವೂ ಅಲ್ಪ ಮಳೆಯಾಗಲಿದೆ.
ಸುಂದರ್ ಮೇತ್ರಿ, ಹವಾಮಾನ ಇಲಾಖೆ ನಿರ್ದೇಶಕ