ಶಿವಪುರ ಕೆರೆಯಲ್ಲಿ ನಗರದ ಬಾಲಕ ಮುಳುಗಿ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ನಗರದ ಟ್ಯಾನರಿ ರಸ್ತೆಯ 17ವರ್ಷದ ಬಾಲಕನೋರ್ವ ದೊಡ್ಡ ಬಳ್ಳಾಪುರದ ಶಿವಪುರದ ಕೆರೆಯಲ್ಲಿ ಈಜಲು ಹೋಗಿ ಸಾವನಪ್ಪಿರುವ ಘಟನೆ ನಡೆದಿದೆ.
ಅಗ್ನಿಶಾಮಕ ದಳ ಮತ್ತು ಸ್ಥಳೀಯ ನಾಗರೀಕರ ಸತತ 5ಗಂಟೆಗಳ ತೀವ್ರ ಶೋಧದ ನಂತರ ಮೃತ ಬಾಲಕ ಶವ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಬೆಂಗಳೂರು ಟ್ಯಾನರಿ ರಸ್ತೆಯ ನಿವಾಸಿ ಸದ್ದಾಂ (17) ಎಂದು ಗುರುತಿಸಿಲಾಗಿದೆ.
ಮೃತನು ಬೆಂಗಳೂರಿನ ಖಾಸಗಿ ಪ್ರೌಢಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗಿದ್ದ. ಶಿಬಿರಕ್ಕೆ ಬಂದಿದ್ದ: ತಾಲೂಕಿನ ಶಿವಪುರದ ಮಸೀದಿಯಲ್ಲಿ ನಡೆಯುತ್ತಿರುವ 40 ದಿನಗಳ ಧರ್ಮ ಉಪನ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಟ್ಯಾನರಿ ರಸ್ತೆಯ 9 ಮಂದಿ ಬಾಲಕರು ಆಗಮಿಸಿದ್ದರು. ಬುಧವಾರ ಮಧ್ಯಾಹ್ನ 2ಗಂಟೆ ಸುಮಾರಿನಲ್ಲಿ ಉಪನ್ಯಾಸ ಮುಗಿಸಿ 4ಮಂದಿ ಬಾಲಕರು ಕೆರೆಯಲು ಈಜಲು ಹಾದಾಗ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


