
ಬೆಂಗಳೂರು: ಚರ್ಚ್‍ಸ್ಟ್ರೀಟ್‍ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದತನಿಖೆಯನ್ನು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. 2014, ಡಿ.28ರಂದು ಚರ್ಚ್‍ಸ್ಟ್ರೀಟ್‍ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದರು.
ಪ್ರಕರಣದ ತನಿಖೆ ನಡೆಸಿದ ನಗರ ಪೊಲೀಸ್‍ರಿಗೆ ಆರೋಪಿಗಳ ಬಂಧನ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಎನ್‍ಐಎಗೆ ವಹಿಸುವಂತೆ ಕೇಂದ್ರಕ್ಕೆ ಕೋರಿತ್ತು.
ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಪ್ರಕರಣವನ್ನು ಎನ್ಐಎ ಹೈದ್ರಾಬಾದ್ ಘಟಕಕ್ಕೆ ವರ್ಗಾಯಿಸಿತ್ತು. ಬುಧವಾರ ಹೈದ್ರಾಬಾದ್ ಎನ್ಐಎ ಘಟಕದಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಕಲಂ 120 ಬಿ, 121, 121ಎ, 153, 302, 307 ಹಾಗೂ ಸ್ಫೋಟಕ ವಸ್ತುಗಳ ನಿಯಂತ್ರಣ, ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.
Advertisement