ಸರ್ಕಾರಿ ಸಾರಿಗೆ ಸಂಸ್ಥೆಗಳ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಯತ್ನ: ರಾಮಲಿಂಗಾರೆಡ್ಡಿ

ಸರ್ಕಾರಿ ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬುಧವಾರ ಆರೋಪಿಸಿದ್ದಾರೆ...
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Updated on

ಬೆಂಗಳೂರು: ಸರ್ಕಾರಿ ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬುಧವಾರ ಆರೋಪಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸರ್ಕಾರಿ ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಖಾಸಗಿಯವರವನ್ನು ಒಪ್ಪಿಸಲು ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಈ ಪ್ರಯತ್ನದಿಂದ ಮುಂದಿನ ದಿನಗಳಲ್ಲಿ ಜನತೆಗೆ ಅಪಾಯವನ್ನು ಎದುರಾಗಲಿದ್ದು, ಸಾರಿಗೆ ಸಂಸ್ಧೆಗಳು ಸೇವಾಮನೋಭಾವದಿಂದ ಕೆಲಸ ಮಾಡಬೇಕಿದೆ. ಕೇಂದ್ರ ಈ ಪ್ರಯತ್ನವು ಒಂದು ವೇಳೆ ಸಫಲವಾದರೆ, ಲಾಭ ಬಂದರೆ ಮಾತ್ರ ಸಾರಿಗೆ ಸಂಸ್ಥೆಗಳು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಕೇಂದ್ರದ ಈ ರೀತಿಯ ಪ್ರಯತ್ನದಿಂದಾಗಿ ಜನಸಾಮಾನ್ಯರು ಮುಂದಿನ ದಿನಗಳಲ್ಲಿ ತೊಂದರೆ ಎದುರಿಸಬೇಕಾದ ಸಂದರ್ಭ ಎದುರಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com