ಪಾರ್ವತಮ್ಮ ರಾಜ್ ಕುಮಾರ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪಾರ್ವತಮ್ಮ ಡಾ. ರಾಜ್ ಕುಮಾರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಲು...
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಪತ್ನಿ ಹಾಗೂ  ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಪತ್ನಿ ಹಾಗೂ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್
Updated on: 

ಬೆಂಗಳೂರು: ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಪತ್ನಿ ಹಾಗೂ ಹಿರಿಯ ಕನ್ನಡ ಚಿತ್ರರಂಗದ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಸಿನಿಮಾ ಕ್ಷೇತ್ರದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರು ಸಲ್ಲಿಸಿರುವ ಸೇವೆಯನ್ನು ಗುರ್ತಿಸಿರುವ ಬೆಂಗಳೂರು ವಿಶ್ವವಿದ್ಯಾಲಯವು ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಮೇ.30 ರಂದು ನಡೆಯಲಿರುವ ಬೆಂಗಳೂರು ವಿಶ್ವವಿದ್ಯಾಲಯದ 50ನೇ ಘಟಿಕೋತ್ಸವದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಸೇರಿದಂತೆ ಮತ್ತಿಬ್ಬರು ಗಣ್ಯ ವ್ಯಕ್ತಿಗಳಾದ ಧಾರವಾಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಬಿ.ಕೆ.ನಾರಾಯಣ ರೆಡ್ಡಿ ಮತ್ತು ಮಾಜಿ ಕೇಂದ್ರೀಯ ಲೋಕೋಪಯೋಗಿ ಎಂಜಿನಿಯರ್ ಚಿನ್ನಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬೆಂಗಳೂರು ವಿವಿಯ ಕುಲಪತಿ ತಿಮ್ಮೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com