ಅಕ್ರಮ ಆಸ್ತಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಅಬಕಾರಿ ಖಾತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ಮಾಡಿದ್ದಾರೆ...
ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಅಬಕಾರಿ ಖಾತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ಮಾಡಿದ್ದಾರೆ.

ಎಂ.ಪಿ.ರೇಣುಕಾಚಾರ್ಯ ಅವರ ದಾವಣೆಗೆರೆ ಜಿಲ್ಲೆಯ ಹೊನ್ನಾಳಿ, ಕುಂದೂರು ಪಟ್ಟಣದಲ್ಲಿರುವ ನಿವಾಸ, ಕಚೇರಿ, ಔಟ್ ಹೌಸ್, ಹಾಸ್ಟೇಲ್ ಮತ್ತು ವಿದ್ಯಾಸಂಸ್ಥೆಗಳ ಮೇಲೆ ಲೋಕಾಯುಕ್ತ ಎಸ್.ಪಿ.ಶ್ರೀಧರ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ರೇಣುಕಾಚಾರ್ಯ ಅವರು ಅಕ್ರಮ ಆಸ್ತಿ ಗಳಿಸಿರುವ ಕುರಿತಂತೆ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ಗುರುಪಾದಯ್ಯ ಮಠದ್ ಅವರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ಪರಿಗಣಿಸಿದ್ದ ದಾವಣಗೆರೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಂದು ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com