ಕಲ್ಲು ತೂರಾಟ: ಚಾಮರಾಜನಗರ ಡಿಸಿಗೆ ಗಾಯ

ಕರಿಕಲ್ಲು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡ ಗುಂಪೊಂದು ಸ್ಥಳಕ್ಕೆ ಜಿಲ್ಲಾಧಿಕಾರಿಯವರು ಆಗಮಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಚಾಮರಾಜನಗರ: ಇಲ್ಲಿನ ಗುಂಡ್ಲುಪೇಟೆ ವೃತ್ತದಲ್ಲಿ ಕರಿಕಲ್ಲು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡ ಗುಂಪೊಂದು ಭಾನುವಾರ ತಡ ರಾತ್ರಿ ಸ್ಥಳಕ್ಕೆ ಜಿಲ್ಲಾಧಿಕಾರಿಯವರು ಆಗಮಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಆಗ ಸ್ಥಳಕ್ಕೆ ಜ್ಲಿಲಾಧಿಕಾರಿ ಎ.ಎಂ. ಕುಂಜಪ್ಪ ಆಗಮಿಸಿದ್ದು, ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಯಿತು. ಈ ಸಂದರ್ಭದಲ್ಲಿ ಡಿಸಿಯವರ ಕಿವಿ ಭಾಗಕ್ಕೆ ಪೆಟ್ಟಾಗಿದ್ದು, ಅವರ ಕಾರು ಜಖಂಗೊಂಡಿದೆ. ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರಕರಣದ ಹಿನ್ನೆಲೆ: ನಗರದ ಕರಿಕಲ್ಲು ಉದ್ಯಮಿಯೊಬ್ಬರಿಗೆ ಸೇರಿದ ಲಾರಿಯಲ್ಲಿ ಕರಿಕಲ್ಲು ಸಾಗಿಸುತ್ತಿದ್ದಾಗ ಹೆಚ್ಚುವರಿ ಎಸ್ಪಿ ಮುತ್ತುರಾಜ್ ತಡೆದು ಸರಿಯಾಗಿ ಪರಿಶೀಲನೆ ನಡೆಸದೆ ಚಾಲಕನಿಗೆ ಥಳಿಸಿದ್ದಾರೆ. ದಾಖಲೆಗಳೆಲ್ಲ ಸರಿಯಾಗಿದ್ದರೂ ಪೊಲೀಸರು ಚಾಲಕನನ್ನು ಥಳಿಸಿದ್ದಾರೆ ಎಂದು ಆರೋಪಿಸಿ ಕರಿಕಲ್ಲು ಉದ್ಯಮಿಗಳ ಗುಂಪು ರಾತ್ರಿ ತಿಭಟನೆ ನಡೆಸಿತು. ಮಾತ್ರವಲ್ಲದೆ ಪೊಲೀಸರು ದೌರ್ಜನ್ಯವೆಸಗಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಎಸ್ಪಿ ಆಗಮಿಸಬೇಕು. ಲಾರಿಯನ್ನು ಬಿಡುಗಡೆಗೊಳಿಸಬೇಕು. ತಪ್ಪೆಸಗಿದವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದಾಗ ಅವರ ಕಾರಿನ ಮೇಲೆ ಕಲ್ಲುತೂರಾಟ ನಡೆದಿದೆ. ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 3 ಗಂಟೆಗಳ ಕಾಲ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಚಾಮರಾಜನಗರ ಗುಂಡ್ಲುಪೇಟೆ ನಡುವಿನ ಸಂಚಾರ ಸ್ತವ್ಯಸ್ತಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com