ಜಿಲ್ಲಾ ಸುದ್ದಿ

ಸರ್ಕಸ್ ಆನೆಗಳ ಮಾಹಿತಿ ನೀಡಲು ಸೂಚನೆ

ಸರ್ಕಸ್ ಆನೆಗಳ ಮಾಹಿತಿ ನೀಡಲು ಸೂಚನೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಸರ್ಕಸ್‍ನಲ್ಲಿ ಬಳಸುವುದಕ್ಕಾಗಿ ಆನೆಗಳನ್ನು ನಿರ್ಮಾಣ ಕಟ್ಟಡದ ಮುಂದೆ ಕಟ್ಟಿಹಾಕಿದ್ದ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಹೈಕೋರ್ಟ್ ಸರ್ಕಾರದ ಪರ ವಕೀಲರಿಗೆ ಸೋಮವಾರ ಮೌಖಿಕವಾಗಿ ಸೂಚನೆ ನೀಡಿದೆ.

ಸರ್ಕಸ್ ಹಾಗೂ ದೇವಾಲಯಗಳಲ್ಲಿ ಆನೆಗಳನ್ನು ಬಳಸುವುದಕ್ಕಾಗಿ ಮಾರ್ಗಸೂಚಿಗಳನ್ನು ರಚಿಸುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿ ಕಂಪ್ಯಾಷನ್ ಅನ್‍ಲಿಮಿಟೆಡ್ ಪ್ಲಸ್ ಆ್ಯಕ್ಷನ್ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ.ಎಸ್.ಕೆ.ಮುಖರ್ಜಿ ಮತ್ತು ನ್ಯಾ.ಬಿ.ವಿ.ರತ್ನಕಲಾ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ಆದೇಶ ನೀಡಿದೆ.

ಸರ್ಕಸ್ ಬಳಕೆಗಾಗಿ ಆನೆಗಳನ್ನು ಕಟ್ಟಿಹಾಕಿರುವ ಸಂಬಂಧ ಪತ್ರಿಕೆಗಳಲ್ಲಿ ವರದಿಯಾಗಿದ್ದ ಬಗ್ಗೆ ಪ್ರಸ್ತಾಪಿಸಿದ ನ್ಯಾ.ಬಿ.ವಿ.ನಾಗರತ್ನ ಅವರು, ಯಾವ ಕಾರಣಕ್ಕಾಗಿ ಆನೆಗಳನ್ನು ಬಳಸಲಾಗುತ್ತಿದೆ. ಅನುಮತಿ ಪಡೆದು ಆನೆಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.