ಮುಖ್ಯಮಂತ್ರಿಗಾಗಿ ನೂತನ ಬಂಗಲೆ ನಿರ್ಮಾಣ: ಎಚ್.ಸಿ. ಮಹಾದೇವಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಿ ನೂತನ ಬಂಗಲೆ ನಿರ್ಮಾಣ ಮಾಡುವ ಉದ್ದೇಶವಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ....
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಿ ನೂತನ ಬಂಗಲೆ ನಿರ್ಮಾಣ ಮಾಡುವ ಉದ್ದೇಶವಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.

ಸಚಿವರ ನಾಲ್ಕು ವಸತಿಗೃಹಗಳ ಜಾಗದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಮತ್ತು ಗೃಹ ಕಚೇರಿ ನಿರ್ಮಾಣ ಮಾಡುವ ಉದ್ದೇಶ ಇದೆ ಎಂದು ಡಾ. ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.

ಸಿಐಡಿ ಕಚೇರಿ ಇರುವ ಕಾರ್ಲಟನ್‌ ಹೌಸ್‌ ಪಾರಂಪರಿಕ ಕಟ್ಟಡದ ಬಳಿ ಮುಖ್ಯಮಂತ್ರಿಗಳಿಗಾಗಿ ಬಂಗಲೆ ನಿರ್ಮಾಣದ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಆದರೆ, ಪಾರಂಪರಿಕ ಕಟ್ಟಡದ ಬಳಿ ಮನೆ ನಿರ್ಮಿಸುವುದು ಬೇಡ ಎನ್ನುವ ತೀರ್ಮಾನಕ್ಕೆ ಬರಲಾಗಿದ್ದು' ಈ ಯೋಜನೆ ಇನ್ನು ಚರ್ಚೆಯ ಹಂತದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

33 ಸಚಿವರು, ವಿಧಾನಸಭಾಧ್ಯಕ್ಷರು, ಸಭಾಪತಿ ಮತ್ತು ಉಭಯ ಸದನಗಳ ಪ್ರತಿಪಕ್ಷ ನಾಯಕರಿಗೆ ವಸತಿ ಗೃಹಗಳನ್ನು ನಿರ್ಮಿಸುವ ಉದ್ದೇಶ ಇದೆ ಎಂದು ಹೇಳಿದ ಅವರು, ಎಷ್ಟು ಸಚಿವರಿಗೆ ಮನೆಗಳ ಕೊರತೆ ಇದೆ ಎಂಬುದನ್ನು ಪರಿಶೀಲಿಸಿ, ನಂತರ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೂ ಜಾಗ ಹುಡುಕುತ್ತಿದ್ದೇವೆ' ಎಂದು ಮಹದೇವಪ್ಪ ತಿಳಿಸಿದ್ದಾರೆ. ಇದಕ್ಕೆ 150 ಕೋಟಿ ರು. ವೆಚ್ಚವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com