ಶೀಲ ಶಂಕಿಸಿ ಪತ್ನಿ ಕೊಂದ ಪತಿ

ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ವೈಟ್ ಫೀಲ್ಡ್ ಸಮೀಪದ ನಾಗೊಂಡ ನಹಳ್ಳಿಯಲ್ಲಿ ಭಾನುವಾರ ನಡೆದಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ವೈಟ್ ಫೀಲ್ಡ್ ಸಮೀಪದ ನಾಗೊಂಡ ನಹಳ್ಳಿಯಲ್ಲಿ ಭಾನುವಾರ ನಡೆದಿದೆ.

ಯಶೋಧ (19) ಕೊಲೆಯಾದವರು. ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಮೃತಳ ಪತಿ ವಿಜಯïಕುಮಾರನನ್ನು (23) ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗೌರಿಬಿದನೂರು ಮೂಲದ ಯಶೋಧರ ಹಾಗೂ ವಿಜಯ್ ಕುಮಾರ್ ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಪಾಲಕರ ವಿರೋಧ ಹಿನ್ನೆಲೆಯಲ್ಲಿ ಅವರಿಂದ ದೂರವಾಗಿ ದಂಪತಿ ನಾಗೊಂಡನಹಳ್ಳಿಯಲ್ಲಿ ನೆಲೆಸಿದ್ದರು. ಆರೋಪಿ ವಿಜಯ್, ಹೌಸ್‍ಕೀಪಿಂಗ್ ಕೆಲಸಕ್ಕೆ ಹೋಗುತ್ತಿದ್ದ.

ಗಾರ್ಮೆಂಟ್ಸ್‍ನಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಯಶೋಧ, ಇತ್ತೀಚೆಗೆ ಕೆಲಸ ಬಿಟ್ಟು ಮನೆಯಲ್ಲಿದ್ದರು. ದಂಪತಿ ಅನ್ಯೋನ್ಯವಾಗಿ ಇದ್ದರು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಭಾನುವಾರ ರಾತ್ರಿಯೂ ಜಗಳವಾಗಿ ದ್ದು, ಇದು ವಿಕೋಪಕ್ಕೆ ತಿರುಗಿದಾಗ ಯಶೋಧ ತಲೆ ಮೇಲೆ ಹಾಲೋಬ್ರಿಕ್ಸ್ ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಪತ್ನಿ ಯಶೋಧ ಅನ್ಯ ಪುರುಷನ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದರಿಂದ ಬೇಸತ್ತು ಕೊಲೆ ಮಾಡಿದ್ದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಟ್‍ ಫೀಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com