ಭಾಷೆ ಬೆಳೆಸುವಲ್ಲಿ ಕಸಾಪ ಪಾತ್ರ ಹಿರಿದು

``ಕನ್ನಡ ಭಾಷೆ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಕನ್ನಡ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ದೊಡ್ಡದು. ಪರಿಷತ್ತಿನ ಅಧ್ಯಕ್ಷರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು,'' ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ...
ಹಿರಿಯ ಸಾಹಿತಿ ಹಂಪ ನಾಗರಾಜಯ್ಯ (ಸಂಗ್ರಹ ಚಿತ್ರ)
ಹಿರಿಯ ಸಾಹಿತಿ ಹಂಪ ನಾಗರಾಜಯ್ಯ (ಸಂಗ್ರಹ ಚಿತ್ರ)

ಬೆಂಗಳೂರು: ``ಕನ್ನಡ ಭಾಷೆ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಕನ್ನಡ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ದೊಡ್ಡದು. ಪರಿಷತ್ತಿನ ಅಧ್ಯಕ್ಷರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು,'' ಎಂದು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ತಿಳಿಸಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೋಮವಾರ ಆಯೋಜಿಸಿದ್ದ `ಶತಮಾನೋತ್ಸವ ದತ್ತಿ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ``ಶತಮಾನದ ಇತಿಹಾಸ ಹೊಂದಿರುವ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನು ನಾಡಿನ ಜನತೆ ಗಮನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷರು ತಮ್ಮ ನಡವಳಿಕೆ, ಭಾಷೆ ಹಾಗೂ ಪದ ಬಳಕೆಯಲ್ಲಿ ಎಚ್ಚರವಹಿಸಬೇಕು,'' ಎಂದರು. ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಮಾತನಾಡಿ, ``ಇತ್ತೀಚಿನ ದಿನಗಳಲ್ಲಿ ರನ್ನ, ಪಂಪ, ರಾಘವಾಂಕರಂಥ ಸಾಹಿತ್ಯ ಸೇರಿದಂತೆ ಪ್ರಾಚೀನ ಕನ್ನಡ ಸಾಹಿತ್ಯ ಕೃತಿಗಳ ಅಧ್ಯಯನ ನಡೆಸುವ ಸಂಶೋಧಕರ ಸಂಖ್ಯೆ ಕ್ಷೀಣಿಸುತ್ತಿದೆ. ಈ ಬೆಳವಣಿಗೆ ಬೇಸರ ತರಿಸಿದೆ,'' ಎಂದರು.

ಕಸಾಪ ಮಾಜಿ ಅಧ್ಯಕ್ಷ ನಲ್ಲೂರು ಪ್ರಸಾದ್ ಮಾತನಾಡಿ, ``ಹಂಪನಾ ಅವರು ತಾವು ಬೆಳೆಯುವುದರೊಂದಿಗೆ ಸುತ್ತಲಿನವರನ್ನು ಸಹ ಬೆಳೆಸಲಿದ್ದಾರೆ,'' ಎಂದು ಗುಣಗಾನ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com