ಶುಶ್ರೂಷಕರ ನೇಮಕಾತಿ ಪ್ರಕ್ರಿಯೆ ಶುರು

ರಾಜ್ಯದ ಸರ್ಕಾರಿ ಆರೋಗ್ಯ ಸಂಸ್ಥೆ ಮತ್ತು ಸ್ವಾಯತ್ತ ಸಂಸ್ಥೆಗಳು ಎದುರಿಸುತ್ತಿರುವ ಶುಶ್ರೂಶಕರ ಕೊರತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದ ಸರ್ಕಾರಿ ಆರೋಗ್ಯ ಸಂಸ್ಥೆ ಮತ್ತು ಸ್ವಾಯತ್ತ ಸಂಸ್ಥೆಗಳು ಎದುರಿಸುತ್ತಿರುವ ಶುಶ್ರೂಶಕರ ಕೊರತೆ ನೀಗುವ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.

ರಾಜ್ಯದಲ್ಲಿರುವ 12 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಖಾಲಿ ಇರುವ 1064 ಶುಶ್ರೂಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದ್ದು, ಅರ್ಹ ಬಿಎಸ್ಸಿ ಶುಶ್ರೂಷಕ ವಿಭಾಗದಲ್ಲಿ ಪದವಿ ಹಾಗೂ ಸಾಮಾನ್ಯ ಶುಶ್ರೂಷಕ ತರಬೇತಿ (ಜಿಎನ್‍ಎಂ) ಪಡೆದವರು ಈ ಹುದ್ದೆಗೆ ಅರ್ಹರು. ಒಟ್ಟು 1064 ಹುದ್ದೆಗಳ ಪೈಕಿ ಬಿಎಸ್ಸಿ ಶುಶ್ರೂಷಕರಿಗೆ ಶೇ.25(243), ಸಾಮಾನ್ಯ ಶುಶ್ರೂಷಕರಿಗೆ ಶೇ.75(821) ಹುದ್ದೆ ನಿಗದಿ ಮಾಡಲಾಗಿದೆ.

ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಡಿ.2ರಂದು ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬಹುದು.ನಿಗದಿತ ಬ್ಯಾಂಕುಗಳಲ್ಲಿ ಅರ್ಜಿ ಶುಲ್ಕ ಪಾವತಿಗೆ ಡಿಸೆಂಬರ್ 4 ಮಧ್ಯಾಹ್ನ 1ಗಂಟೆ ವರೆಗೆ ಅವಕಾಶವಿರುತ್ತದೆ. ಸಾಮಾನ್ಯ ಅರ್ಹತೆ 35 ವರ್ಷ, ಪ್ರವರ್ಗ 2ಎ, 2ಬಿ, 3ಬಿಗೆ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ 40 ವರ್ಷ ನಿಗದಿ ಮಾಡಲಾಗಿದೆ. ಲಿಖಿತ ಅರ್ಜಿಯನ್ನು ಸ್ವೀಕರಿಸುವುದಿಲ್ಲ, ನೇರವಾಗಿ ಆನ್‍ಲೈನ್ ಮುಖಾಂತರವೇ ಸಲ್ಲಿಸಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಸಂಸ್ಥೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸಿದಲ್ಲಿ,ಅರ್ಜಿಯಲ್ಲಿ ತಮಗೆ ಇಷ್ಟವಿರುವ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಅಂತಹ ಸಂಸ್ಥೆಗಳಿಗ ಮಾತ್ರ ಮೆರಿಟ್ ಪಟ್ಟಿಯಲ್ಲಿ ಹೆಸರು ಸೇರಿಸಿ ಪ್ರಕಟಿಸಲಾಗುತ್ತದೆ. ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿರುವುದರಿಂದ ಈ ಸಂಸ್ಥೆಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.ಆದರೆ ಈ ಸಂಸ್ಥೆಗೆ ಅರ್ಜಿ ಸಲ್ಲಿಸಿದವರು ಬೇರೆ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ವೀಕ್ಷಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com