
ಬೆಂಗಳೂರು: ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಮತ್ತುಐಪಿಸಿ ಅನ್ವಯ ಲೋಕಾಯುಕ್ತ ಎಸ್‍ಪಿಗೆ ದೂರು ಸಲ್ಲಿಸಲಾಗಿದೆ.
ಪಾಲಿಕೆ ಸದಸ್ಯರು ಆಸ್ತಿ ವಿವರ ಸಲ್ಲಿಸದಿದ್ದರೂ ಅವರನ್ನು ಸದಸ್ಯರನ್ನಾಗಿಯೇ ಮುಂದುವರಿಸುತ್ತಿರುವುದರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾ ಯುಕ್ತ ಎಸ್ಪಿ ಸೋನಿಯಾ ನಾರಂಗ್‍ಗೆ ಮಂಗಳವಾರ ದೂರು ಸಲ್ಲಿಸಿದೆ. ದೂರು ದಾಖಲಿಸಿಕೊಂಡಿರುವ ಸೋನಿಯಾ ನಾರಂಗ್ ಈ ಬಗ್ಗೆ ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ ಎಂದು ಲೋಕಾ ಯುಕ್ತ ಮೂಲಗಳು ತಿಳಿಸಿವೆ.
1976ರ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ ಸೆಕ್ಷನ್ 19ರ ಪ್ರಕಾರ ಪಾಲಿಕೆ ಸದಸ್ಯರು ಅಧಿಕಾರ ವಹಿಸಿಕೊಂಡ ತಿಂಗಳ ಒಳಗಾಗಿ ತಮ್ಮ ಆಸ್ತಿ ವಿವರ ಸಲ್ಲಿಸಬೇಕು. ಆಸ್ತಿ ವಿವವರ ಸಲ್ಲಿಸದ ಪಾಲಿಕೆ ಸದಸ್ಯರಿಗೆ ಪಾಲಿಕೆ ವೇತನ ಸೇರಿದಂತೆ ಇನ್ನಿತರೆ ಸೌಲಭ್ಯ ನೀಡಲಾಗುತ್ತಿದೆ. ತಿಂಗಳ ಒಳಗೆ ಆಶ್ತಿ ವಿವರ ಸಲ್ಲಿಸದಿದ್ದಲ್ಲಿ ಅನರ್ಹಗೊಳ್ಳುತ್ತಾರೆ ಎಂಬ ನಿಯಮ ಇದ್ದರೂ ಈ ಬಗ್ಗೆ ಮೇಯರ್ ಕ್ರಮ ಕೈಗೊಂಡಿಲ್ಲ ಎಂದು ಜನಾಧಿಕಾರ ಸಂಘರ್ಷ ಪರಿಷತ್ ದೂರಿನಲ್ಲಿ ತಿಳಿಸಿದೆ.
ಪಾಲಿಕೆಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಸೆ.29ರ ಒಳಗೆ ಆಸ್ತಿ ವಿವರ ಸಲ್ಲಿಸಬೇಕಿತ್ತು. ಆದರೆ, ಅರ್ಧಕ್ಕಿಂತ ಹೆಚ್ಚು ಸದಸ್ಯರು ಇನ್ನೂ ಸಲ್ಲಿಸಿಲ್ಲ. ಆಸ್ತಿ ವಿವರ ಸಲ್ಲಿಸದವರ ಪಟ್ಟಿಯನ್ನು ಮೇಯರ್ ಸರ್ಕಾರಕ್ಕೆ ಸಲ್ಲಿಸುವಲ್ಲಿ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಕೆಎಂಸಿ ಕಾಯಿದೆಯಲ್ಲೇನಿದೆ?
ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ ಸೆಕ್ಷನ್ 19ರ ಪ್ರಕಾರ ಪಾಲಿಕೆ ಸದಸ್ಯರು ಅಧಿಕಾರ ವಹಿಸಿಕೊಂಡ ತಿಂಗಳ ಒಳಗೆ ಆಸ್ತಿ ವಿವರ ಸಲ್ಲಿಸಬೇಕು. ಆಸ್ತಿ ವಿವರ ಸಲ್ಲಿಸದ ಪಾಲಿಕೆ ಸದಸ್ಯರಿಗೆ ಪಾಲಿಕೆ ವೇತನ ಸೇರಿದಂತೆ ಇನ್ನಿತರೆ ಸೌಲಭ್ಯ ನೀಡಲಾಗುತ್ತಿದೆ. ತಿಂಗಳ ಒಳಗೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಅನರ್ಹಗೊಳ್ಳುತ್ತಾರೆ ಎಂಬ ನಿಯಮವಿದ್ದರೂ ಈ
ಬಗ್ಗೆ ಮೇಯರ್ ಮಂಜುನಾಥ ರೆಡ್ಡಿ ಕ್ರಮ ಕೈಗೊಂಡಿಲ್ಲ ಎಂದು ಜನಾ„ಕಾರ ಸಂಘರ್ಷ ಪರಿಷತ್ ದೂರಿನಲ್ಲಿ ತಿಳಿಸಿದೆ.
Advertisement