ಸಿಂಹಾಸನ ವೀಕ್ಷಣೆಗೆ ನಿರ್ಬಂಧ; ವರದಿಗೆ ಸೂಚನೆ

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿ...
ಮೈಸೂರು ರಾಜರ ರತ್ನ ಖಚಿತ ಸಿಂಹಾಸನ
ಮೈಸೂರು ರಾಜರ ರತ್ನ ಖಚಿತ ಸಿಂಹಾಸನ
ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಅರಮನೆ ಮಂಡಳಿಯಿಂದ ವರದಿ ಕೇಳಲಾಗಿದೆ ಎಂದು ಕಂದಾಯ ಮತ್ತು ಜಿಲ್ಲಾ  ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ತಿಳಿಸಿದರು. 
ಸಾರ್ವಜನಿಕರು ಹಾಗೂ ಪ್ರವಾಸಿಗರಿರು ಸಿಂಹಾಸನ ವೀಕ್ಷಣೆಗೆ ಯಾವ ಕಾರಣಕ್ಕೆ ನಿರ್ಬಂಧ ಹಾಕಲಾಗಿದೆ ಎಂಬುದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಈ ಸಂಬಂಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಚರ್ಚಿಸಿ ಕಾರಣ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. 
ದಸರಾ ಜಂಬೂಸವಾರಿಯಂದು ಚಿನ್ನದ ಅಂಬಾರಿ ಕೊಡುವುದು ತಡವಾಗಿತ್ತು. ಅಂಬಾರಿಗೆ ಪ್ರತಿವರ್ಷ ರಾಜಮನೆತನದ ಹೆಸರಿನಲ್ಲಿ ವಿಮೆ ಮಾಡಿಸಲಾಗುತ್ತಿತ್ತು. ಈ ಬಾರಿ ಜಿಲ್ಲಾಧಿಕಾರಿ ಹೆಸರಿನಲ್ಲಿ ವಿಮೆ ಮಾಡಿಸಿದ್ದರಿಂದ ಅಂಬಾರಿ ಕೊಡುವುದು ತಡವಾಗಿತ್ತು. 
ಈ ವೇಳೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಸಮಾಲೋಚ ನೆ ನಡೆಸಿ ಅಂಬಾರಿ ಕೊಡಲು ಒಪ್ಪಿಸಿದ್ದಾಗಿ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com