ಬರ ಕಾಮಗಾರಿ ಆರಂಭಕ್ಕೆ ಆಗ್ರಹ: ರಾಜ್ಯ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬರಗಾಲ ಕಾಮಗಾರಿ ಪ್ರಾರಂಭಿಸಬೇಕು ಮತ್ತು ಕೂಲಿಕಾರರಿಗೆ ಕೆಲಸ ಮಾಡಿದ ಕೂಲಿ ಹಣ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬರಗಾಲ ಕಾಮಗಾರಿ ಪ್ರಾರಂಭಿಸಬೇಕು ಮತ್ತು ಕೂಲಿಕಾರರಿಗೆ ಕೆಲಸ ಮಾಡಿದ ಕೂಲಿ ಹಣ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ತಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ಭೀಕರ ಬರಗಾಲದಿಂದ ರೈತರು ಹಾಗೂ ಕೂಲಿಕಾರರು ಆತಂಕಪಡುತ್ತಿದ್ದಾರೆ. ಮಳೆ ಇಲ್ಲದೆ ಅಲ್ಪ ಸ್ವಲ್ಪ ಇದ್ದ ತೊಗರಿ ಬೆಳೆಯೂ ಒಣಗಿ ಹೋಗಿದೆ. ಹಿಂಗಾರು ಬಿತ್ತನೆ ಎಲ್ಲಿಯೂ ಆಗದೇ ರೈತರು ತುಂಬಾ ಭಯಭೀತರಾಗಿ ದ್ದಾರೆ. ಇನ್ನೊಂದೆಡೆ ಕೂಲಿಕಾರರಿಗೆ ಕೆಲಸವಿಲ್ಲದೆ ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಕೂಲಿಕಾರರಿಗೆ ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಲು ಕೂಡಲೇ ದ್ಯೋಗ ಖಾತ್ರಿ ಯೋಜನೆ ಕೆಲಸಗಳು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗಿಹರಿಸಬೇಕು.

ಸರಕಾರದಿಂದ ಮಂಜೂರಾಗಿರುವ ಮನೆಗಳನ್ನು ಕಟ್ಟಿಕೊಂಡವರಿಗೆ ಕೂಡಲೇ ಬಿಲ್ಲು ಪಾವತಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು.ರೈತರಿಗೆ ಆತ್ಮಹತ್ಯೆ ತಡೆಯಲು ಕೇರಳ ಮಾದರಿಯಲ್ಲಿ ಸಾಲ  ಋಣಮುಕ್ತ ಕಾಯ್ದೆ ಜಾರಿಗೊಳಿಸಬೇಕು. ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ರೂ. 10 ಲಕ್ಷ ಪರಿಹಾರ ನೀಡಬೇಕು. ರೈತರ ಪಂಪ್ ಸೆಟ್‍ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಸೇರಿದಂತೆ ಒಟ್ಟು 12 ಬೇಡಿಕೆಗಳ ಮನವಿ ಸಲ್ಲಿಸಿದ್ರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com