
ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಯಲ್ಲಿ ಬಾಕಿ ಇರುವ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು, ಈ ವಾರದೊಳಗೆ ಪ್ರಕಟಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಶಾಸಕರು ಮತ್ತು ಬಿಬಿಎಂಪಿ ಸದಸ್ಯರೊಂದಿಗೆ ಚರ್ಚಿಸಲಾಗುವುದೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇನ್ನು ಕುಮಾರಸ್ವಾಮಿ ಅವರ ಬೆಂಬಲ ವಾಪಸು ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
Advertisement