ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ವಾಪಸ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಗೆ ತೆರೆ ಬಿದ್ದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಗೆ ತೆರೆ ಬಿದ್ದಿದೆ. ಸರ್ಕಾರದ ಜೊತೆಗಿನ ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿ ಬಂದ್ ವಾಪಸ್ ಪಡೆದಿರುವುದಾಗಿ ಎಫ್ ಕೆಸಿಸಿಐ ಉಪಾಧ್ಯಕ್ಷ ಎಂ.ಸಿ ದಿನೇಶ್ ಕುಮಾರ್ ತಿಳಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಸಿಎಂ ತಮ್ಮ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಬಗೆಹರಿಸುವ ಭರವಸೆ ನೀಡಿದ್ದರ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡಲಾಗಿದೆ ಎಂದು ಹೇಳಿದ್ದಾರೆ.

ದಾಸ್ತಾನು ಮಿತಿ ಪರವಾನಗಿ ವಿಷಯದಲ್ಲಿ ತಮ್ಮ ಬೇಡಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಶುಕ್ರವಾರದಿಂದ ವಹಿವಾಟು ಸ್ಥಗಿತಗೊಂಡಿತ್ತು.

ದಾಸ್ತಾನು ಮಿತಿ ಪರವಾನಗಿ ವಿಚಾರದಲ್ಲಿ ಇನ್ನೂ ಗೊಂದಲ, ಅರ್ಜಿ ಸಲ್ಲಿಸಿದವರಿಗೆ ಇಲ್ಲಿವರೆಗೆ ಪರವಾನಗಿ ಸಿಕ್ಕದಿರುವುದು. ಜೊತೆಗೆ ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮ ದಾಸ್ತಾನು ಎಂದು ಹೇಳಿ ಬೇಳೆಕಾಳುಗಳ ದಾಸ್ತಾನು ಜಪ್ತಿ ಮಾಡಿಕೊಂಡಿರುವುದನ್ನು ವಿರೋಧಿಸಿ ಎಪಿಎಂಸಿ ಬಂದ್ ಗೆ ಕರೆ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com