ರಾಘವೇಶ್ವರ ಶ್ರೀ ಮಧ್ಯಂತರ ಅರ್ಜಿ ವಜಾ

ರಾಮಚಂದ್ರಾಪುರದ ರಾಘವೇಶ್ವರ ಭಾರತಿ ಸ್ವಾಮಿಜಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನಗರದ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ರಾಘವೇಶ್ವರ ಭಾರತಿ ಸ್ವಾಮಿಜಿ
ರಾಘವೇಶ್ವರ ಭಾರತಿ ಸ್ವಾಮಿಜಿ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಸಿಐಡಿ ಪೊಲೀಸರ ಸುಪರ್ದಿಯಲ್ಲಿದ್ದು, ಅವುಗಳನ್ನು ನ್ಯಾಯಾಲಯದ ವಶಕ್ಕೆ ನೀಡಬೇಕು ಎಂದು ರಾಮಚಂದ್ರಾಪುರದ ರಾಘವೇಶ್ವರ ಭಾರತಿ ಸ್ವಾಮಿಜಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನಗರದ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣ ಸಂಬಂಧಿತ ದಾಖಲೆಗಳು, ವಿಧಿವಿಜ್ಞಾನ ಪ್ರಯೋಗಾಲಯ ನೀಡಿದ್ದ ವರದಿ ಹಾಗೂ ತನಿಖಾ ಸಂದರ್ಭದಲ್ಲಿ ಸಂಗ್ರಹಿಸಿದ್ದ ಸಾಕ್ಷಿಗಳ ಹೇಳಿಕೆಗಳು ಸಿಐಡಿ ವಶದಲ್ಲಿವೆ. ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ. ಆದ್ದರಿಂದ ಅವುಗಳನ್ನು ನ್ಯಾಯಾಲಯ ತನ್ನ ಸುಪರ್ದಿಗೆ ಪಡೆಯಬೇಕು ಎಂದು ಕೋರಿ ಸ್ವಾಮಿಜಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಮಹವರ್ಕರ್, ಪ್ರಕರಣದ ಸಂಬಂಧ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಈಗಾಗಲೇ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಹಂತದಲ್ಲಿ ಸಾಕ್ಷಗಳನ್ನು ತಿರುಚುವುದಕ್ಕೆ ಅಸಾಧ್ಯ ಎಂದು ಅಭಿಪ್ರಾಯಪಟ್ಟರು. ಅಲ್ಲದೇ ಅರ್ಜಿಯನ್ನು ವಜಾಗೊಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com