

ಬೆಂಗಳೂರು: ಬೆಂಗಳೂರಿನ ಹೊಲವಲಯದಲ್ಲಿ ಚಲಿಸುವ ಮಿನಿ ಬಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಚಾಲಕ ಹಾಗೂ ಕ್ಲೀನರ್‌ನನ್ನು ನವೆಂಬರ್ 20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗುರುವಾರ ಬೆಳಗ್ಗೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಚೇರಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಿನಿ ಬಸ್ ಚಾಲಕ ರವಿ ಹಾಗೂ ಕ್ಲೀನರ್ ಮಂಜುನಾಥ್‌ನನ್ನು ನಿನ್ನೆ ಪೊಲೀಸರು ಬಂಧಿಸಿದ್ದರು.
ಬಂಧಿತ ಆರೋಪಿಗಳನ್ನು ಪೊಲೀಸರು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ನವೆಂಬರ್ 20ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.