ಪ್ರಶಸ್ತಿ ವಾಪ್ಸಿ ಬೇಡ ಮತ್ತಷ್ಟು ಬರೆಯಿರಿ: ಉಮಾಶ್ರೀ
ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಖಂಡಿಸಿ ಪ್ರಶಸ್ತಿ ವಾಪಸು ಮಾಡುತ್ತಿರುವ ಸಾಹಿತಿಗಳು ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕಿದೆ. ಪ್ರಶಸ್ತಿ ವಾಪಸು ಮಾಡುವ ಬದಲು ಮತ್ತಷ್ಟು ಬರೆದು ಜನರಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಮನವಿ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಗೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಶಸ್ತಿ ವಾಪಾಸು ಮಾಡಿ ಪ್ರತಿಭಟನೆ ಮಾಡೋದು ಬೇಡ. ತಮ್ಮ ಲೇಖನಿ ಮೂಲಕವೇ ಜಾಗೃತಿ ಮೂಡಿಸೋ ಕೆಲಸವನ್ನು ಸಾಹಿತಿಗಳು ಮಾಡಬೇಕು ಎಂದಿದ್ದಾರೆ. ಇನ್ನೊಂದೆಡೆ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ತೆಗೆದುಕೊಂಡ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಪ್ರತಿಭಟನೆ ಮಾಡೋದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ವಿಚಾರದಲ್ಲಿ ಶಾಸಕರ ಅಸಮಾಧಾನ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಶಾಸಕರ ಮನವಿಯನ್ನು ಪರಿಗಣಿಸಲಾಗಿದೆ. ಶಾಸಕರ ಸಲಹೆಯನ್ನು ಪರಿಗಣಿಸಿಲ್ಲ ಎಂಬ ಆರೋಪ ನಿರಾಧಾರ. ಎಲ್ಲಾ ಶಾಸಕರ ಸಲಹೆ ಪರಿಗಣನೆಯನ್ನೇ ತೆಗೆದುಕೊಂಡೇ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಕವಿ ಆಯ್ಕೆ ಪ್ರಕ್ರಿಯೆ ಸರ್ಕಾರ ಕೈ ಬಿಟ್ಟಿಲ್ಲ. ರಾಷ್ಟ್ರಕವಿ ಆಯ್ಕೆ ಸಮಿತಿ ನೀಡಿದ್ದ ವರದಿ ಆಧರಿಸಿ ಮತ್ತೊಮ್ಮೆ ಪರಿಶಿಲಿಸಿ ಮುಖ್ಯಮಂತ್ರಿ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನಾಡಗೀತೆಯನ್ನು ಕಡಿತಗೊಳಿಸುವ ಕುರಿತು ಸರ್ಕಾರ ಇನ್ನೂ ಸಾರ್ವಜನಿಕರ ಅಬಿsಪ್ರಾಯ ಪಡೆಯುತ್ತಿದೆ. ಶೀಘ್ರವೇ ಎಲ್ಲ ಅಬಿsಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳಲಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ