ಸಚಿವ ಆಂಜನೇಯ ಪತ್ನಿ ಲಂಚ ಪ್ರಕರಣ: ಸಿಐಡಿ ತನಿಖೆಗೆ ಆದೇಶ

ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಪತ್ನಿ ಟೆಂಡರ್ ಗಾಗಿ ಕಮೀಷನ್ ಪಡೆದ ಪ್ರಕರಣವನ್ನು ಸರ್ಕಾರ...
ಸಚಿವ ಎಚ್. ಆಂಜನೇಯ
ಸಚಿವ ಎಚ್. ಆಂಜನೇಯ
ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರ ಪತ್ನಿ ಟೆಂಡರ್ ಗಾಗಿ ಕಮೀಷನ್ ಪಡೆದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. 
ಸಚಿವರ ಅಧಿಕೃತ ನಿವಾಸದಲ್ಲೇ ಅವರ ಪತ್ನಿ ವಿಜಯ ಅವರು ಕಮೀಷನ್ ಪಡೆಯುತ್ತಿರುವ ದೃಶ್ಯ ಖಾಸಗಿ ಟೀವಿ ವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿತ್ತು.
ಈ ಸಂಬಂಧ ಪ್ರಮುಖ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು, ನಾಗರಿಕ ವೇದಿಕೆಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿ, ಆಂಜನೇಯ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಡ ಹೇರಿವೆ. ಈ ಹಿನ್ನಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ.
ಈ ಸಂಬಂಧ ಪತ್ರಕರ್ತರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಲಂಚ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ವರದಿ ಬಂದ ನಂತರ ಸರ್ಕಾರ ಅರ್ಧ ಗಂಟೆಯೊಳಗೆ ಕ್ರಮಕೈಗೊಳ್ಳುತ್ತದೆ. ಒಂದು ವೇಳೆ ಆಂಜನೇಯ ಲಂಚ ಪ್ರಕರಣ ಸಾಬೀತಾದರೆ, ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com