
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಮೇಲುಗೈ ಸಾಧಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಿದೆ.
ಇಂದು ನಡೆದ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಹೀಗಾಗಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕೆ.ಎಲ್. ಭೈರಪ್ಪ ಅವರು 41 ಮತಗಳನ್ನು ಪಡೆಯುವ ಮೂಲಕ ಮೈಸೂರಿನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಭೈರಪ್ಪ ಅವರ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ನಾಗಭೂಷಣ್ ಅವರು 33 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಬಿಜೆಪಿ ಬೆಂಬಲಿತ ಮಹಿಳಾ ಅಭ್ಯರ್ಥಿ ವನಿತಾ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಹಂಚಿಕೊಂಡಿದ್ದವು.
Advertisement