
ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧಿಸಲು ಆದೇಶ ಹೊರಡಿಸಿದೆ ಎಂದು ಮೇಯರ್ ಮಂಜುನಾಥ ರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆದೇಶದ ಪ್ರತಿ ಕೈ ಸೇರುತ್ತಿದ್ದಂತೆಯೇ, ಬಿಬಿಎಂಪಿ ಕಚೇರಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಆದೇಶ ಹೊರಡಿಸುವಂತೆ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಿಗೂ ಈ ಬಗ್ಗೆ ಪತ್ರ ಬರೆಯಲಾಗಿದೆ.
ಪಾಲಿಕೆಯ ಎಲ್ಲ ವಲಯದ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿ 40 ಮೈಕ್ರಾನ್ ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು ಎಂದು ಸೂಚಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ಕಂಡುಬಂದಲ್ಲಿ ದಂಡ ವಿಧಿಸಬೇಕು ಎಂದು ತಿಳಿಸಲಾಗಿದೆ. ಪ್ಲಾಸ್ಟಿಕ್ ಉತ್ಪನ್ನಗಳಾದ ಕೈ ಚೀಲ, ಬಂಟಿಂಗ್, ಬ್ಯಾನರ್, ನಿಷೇಧ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದರು.
Advertisement