ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಕೊಡಗು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಟ್ಟಪ್ಪ ಗಲಭೆ ವೇಳೆ ಜಿಲ್ಲಾ ಆಸ್ಪತ್ರೆಯ ಬಳಿ ಉದ್ರಿಕ್ತ ಗುಂಪಿನ ಕಲ್ಲೇಟಿಗೆ ಸಿಲುಕಿ ಗುಂಡಿಗೆ ಬಿದ್ದು ಮೃತಪಟ್ಟಿದ್ದರು. ಖಚಿತ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.