ಧಾರ್ಮಿಕ ದತ್ತಿ ಕಾಯ್ದೆ ರದ್ದು

ಬೆಂಗಳೂರು: ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಆಡಳಿತಾಧಿಕಾರಿ, ಕಾರ್ಯನಿರ್ವಾಹಣಾಧಿಕಾರಿ ನೇಮಿಸಲು, ವ್ಯವಸ್ಧಾಪನಾ ಹಾಗೂ ಅಭಿವೃದ್ಧಿ ಸಮಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶಿಸಲು ಅನುಕೂಲವಾಗುವಂತೆ 2011 ಮತ್ತು 2012ರಲ್ಲಿ ಜಾರಿ ಮಾಡಿದ್ದ ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ (ತಿದ್ದುಪಡಿ) ಕಾಯ್ದೆಯನ್ನು ರದ್ದುಗೊಳಿಸಿ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ಇದರಿಂದ ರಾಜ್ಯದ ಮುಜರಾಯಿ ಇಲಾಖೆ ಅಧೀನದ 35 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಿಗೆ ಆಡಳಿತಾಧಿಕಾರಿ, ಕಾರ್ಯನಿರ್ವಾಹಣಾಧಿಕಾರಿ ನೇಮಿಸುವ ಮತ್ತು ವ್ಯವಸ್ಥಾಪನಾ ಮತ್ತು ಅಭಿವೃದ್ಧಿ ಸಮಿತಿಗಳಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರ ಕಳೆದುಕೊಂಡಂತಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ -2011 ಮತ್ತು 2012 ಗೊಂದಲದಿಂದ ಕೂಡಿದ್ದು, ಸಂವಿಧಾನ ಬಾಹಿರವಾಗಿದೆ. ಆದ್ದರಿಂದ ಕಾಯ್ದೆ ರದ್ದುಗೊಳಿಸಲಾಗುತ್ತಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ರಾಜ್ಯ ಮುಜರಾಯಿ ಇಲಾಖೆಗೆ ವ್ಯಾಪ್ತಿಯ ದೇವಸ್ಥಾನಗಳ ವ್ಯವಸ್ಥಾಪನ ಸಮಿತಿ ಹಾಗೂ ಅಬಿsವೃದಿಟಛಿ ಸಮಿತಿಗಳ ಸಮಿತಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವಂತೆ ಅನುಕೂಲವಾಗಲು 2003ರಲ್ಲಿ ಜಾರಿಗೆ ತಂದಿದ್ದ ಕರ್ನಾಟಕ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿ ಕಾಯ್ದೆಗೆ ಸರ್ಕಾರ 2011 ಮತ್ತು 2012ರಲ್ಲಿ ತಿದ್ದುಪಡಿ ತಂದಿತ್ತು.
ಈ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಕಾರವಾರದ ಮಹಾತೋ ಬಾರ ಮುರುಡೇಶ್ವರ ದೇವಸ್ಥಾನ ಸೇರಿದಂತೆ ನೂರಾರು ದೇವಸ್ಥಾನ ಆಡಳಿತ ಮಂಡಳಿಗಳು ಹೈಕೋರ್ಟ್‍ಗೆ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


