ಜಿಲ್ಲಾ ಸುದ್ದಿ

ಆರ್‍ಡಿಪಿಆರ್ ಅಧಿಕಾರಿ ಅಮಾನತು ಆದೇಶ ರದ್ದು

ಆರ್‍ಡಿಪಿಆರ್ ಅಧಿಕಾರಿ ಅಮಾನತು ಆದೇಶ ರದ್ದು
ಹೈ ಕೋರ್ಟ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಯಡಿ ಬಿಡುಗಡೆಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗಬೇಕಾಗಿದ್ದ ನೂರಾರು ಕೋಟಿ ರೂಪಾಯಿಯನ್ನು ಕೆಲ ಬ್ಯಾಂಕುಗಳಲ್ಲಿ ಠೇವಣಿ ಮಾಡಿ ಗಂಭೀರ ಸ್ವರೂಪದ ಹಣಕಾಸಿನ ಅಶಿಸ್ತು ಎಸಗಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಪ ಕಾರ್ಯದರ್ಶಿಯ ವರ ವಿರುದ್ಧ ಈ ವರೆಗೆ ದೋಷಾರೋಪಣಾ ಪಟ್ಟಿ ಸಲ್ಲಿಸದೇ ಇರುವುದರಿಂದ ಸರ್ಕಾರ ಅವರ ಮೇಲಿನ ಅಮಾನತು ಆದೇಶವನ್ನು ಹಿಂಪಡೆದುಕೊಂಡಿದೆ.

ಕರ್ನಾಟಕ ಆರ್ಥಿಕ ಸಂಹಿತೆ 1958ರ ನಿಯಮಗಳನ್ನು ಉಲ್ಲಂಘಿಸಿ ನಾಲ್ಕು ವರ್ಷಗಳಿಂದ 134 ಕೋಟಿ ರುಪಾಯಿ ಹಣವನ್ನು ಆಂಧ್ರ ಬ್ಯಾಂಕ್ ಖಾತೆಯಲ್ಲಿ ಇಟ್ಟಿದ್ದ ಪ್ರಕರಣ ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ರಾಮಕೃಷ್ಣ ಅವರ ವಿರುದಟಛಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಪಡಿಸಲಾಗಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಮಕೃಷ್ಣ ಅವರು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಅಮಾನತಿಗೆ ಒಳಗಾಗಿರುವ ಅಧಿಕಾರಿ ವಿರುದಟಛಿ ಮೂರು ತಿಂಗಳೊಳಗೆ ದೋಷಾರೋಪಣಾ ಪಟ್ಟಿ ಜಾರಿ ಮಾಡಿಲ್ಲದ ಕಾರಣ ಅವರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರವನ್ನು ಸರ್ಕಾರಕ್ಕೆ ನೀಡುತ್ತಾ ಅಧಿಕಾರಿಯ ಅಮಾನತು ಆದೇಶ ರದ್ದುಪಡಿಸಿದೆ.

ನಂತರ ರಾಮಕೃಷ್ಣ ಅವರು ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿ ತಮ್ಮ ನ್ನು ಸೇವೆಗೆ ಪುನರ್ ಸ್ಥಾಪಿಸಿ ಸ್ಥಳ ನಿಯುಕ್ತಿಗೊಳಿಸಲು ಕೋರಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಬಳಕೆಯಾಗದ ಅನುದಾನವನ್ನು ಹಲವಾರು ಬ್ಯಾಂಕುಗಳಲ್ಲಿ ಠೇವಣಿ ಹೂಡಿರುವ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವ ಸಲುವಾಗಿ ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯು ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಈ ವರದಿ ಆಧರಿಸಿ ಮುಂದಿನ ಕ್ರಮ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.