ಸಾಂದರ್ಭಿಕ ಚಿತ್ರ
ಜಿಲ್ಲಾ ಸುದ್ದಿ
ಬಾಗಲಕೋಟೆ: ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 35ಮಕ್ಕಳು ಅಸ್ವಸ್ಥ
ಬೊಮ್ಮಣಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರಗೆ ದಾಖಲಾಗಿರುವ ಘಟನೆ...
ಬಾಗಲಕೋಟೆ: ಬೊಮ್ಮಣಗಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರಗೆ ದಾಖಲಾಗಿರುವ ಘಟನೆ ಶನಿವಾರ ನಡೆದಿದೆ.
ಇಂದು ಅರ್ಧ ದಿನ ಮಾತ್ರ ಶಾಲೆ ಇದ್ದುದರಿಂದ ಮಧ್ಯಾಹ್ನ ಬಿಸಿಯೂಟದ ಬದಲಾಗಿ ಉಪ್ಪಿಟ್ಟು ನೀಡಲಾಗಿತ್ತು.ಉಪ್ಪಿಟ್ಟು ಸೇವಿಸುತ್ತಿದ್ದಂತೆ ಮಕ್ಕಳು ವಾಂತಿ, ಬೇಧಿ ಮತ್ತು ತಲೆ ಸುತ್ತು ಬಂದು ಬಿದ್ದಿದ್ದಾರೆ. ಕೂಡಲೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಎಲ್ಲಾ ಮಕ್ಕಳು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಆಹಾರಕ್ಕೆ ವಿಷ ಸೇರಲು ಏನು ಕಾರಣ ಎಂಬುದು ನಿಖರವಾಗಿ ಗೊತ್ತಿಲ್ಲ. ಆದರೆ ಮಕ್ಕಳ ಆರೋಗ್ಯ ಸದ್ಯಕ್ಕೆ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಈ ಮಧ್ಯೆ, ಉಪ್ಪಿಟ್ಟಿಗೆ ಬಳಕೆ ಮಾಡಲಾಗಿದ್ದ ರವೆಯಲ್ಲಿ ಹುಳುಗಳು ಇದ್ದವು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ