ಜಿಲ್ಲಾ ಸುದ್ದಿ

ಕೊಲೆ ಆರೋಪ: ಬಜರಂಗ ದಳ ಕಾರ್ಯಕರ್ತ ಭುವಿತ್ ಶೆಟ್ಟಿ ಬಂಧನ

ಕೊಲೆ ಆರೋಪ: ಬಜರಂಗ ದಳ ಕಾರ್ಯಕರ್ತ ಭುವಿತ್ ಶೆಟ್ಟಿ ಬಂಧನ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಡಾ. ಎಂ. ಎಂ ಕಲಬುರ್ಗಿ ಅವರ ಹತ್ಯೆಯಾದ ನಂತರ ಕನ್ನಡದ ಲೇಖಕ ಫ್ರೊ. ಕೆ.ಎಸ್ ಭಗವಾನ್ ಅವರಿಗೆ ಟ್ವಿಟರ್‌ನಲ್ಲಿ ಬೆದರಿಕೆಯೊಡ್ಡಿ ಬಂಧನಕ್ಕೀಡಾಗಿದ್ದ ಬಜರಂಗ ದಳದ ಕಾರ್ಯಕರ್ತ ಭುವಿತ್ ಶೆಟ್ಟಿ ಇದೀಗ ಕೊಲೆ ಆರೋಪದಡಿಯಲ್ಲಿ ಬಂಧಿತರಾಗಿದ್ದಾರೆ. 
ಕಳೆದ ವಾರ ಬಂಟ್ವಾಳ ತಾಲೂಕಿನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವೇಳೆ ಕೋಮುಗಲಭೆ ನಡೆದಿದ್ದು, ಅದರಲ್ಲಿ ಹರೀಶ್ ಪೂಜಾರಿ ಎಂಬಾತ ಹತ್ಯೆಗೀಡಾಗಿದ್ದನು. ಈ ಹತ್ಯೆಯ ಬಗ್ಗೆ ತನಿಖೆ ನಡೆಸಿದಾಗ ಭುವಿತ್ ಶೆಟ್ಟಿ ಮತ್ತು ಆತನ ಸ್ನೇಹಿತ ಹರೀಶ್ ಪೂಜಾರಿಯ ಹಂತಕರೆಂದು ತಿಳಿದುಬಂದಿದೆ. 
ಬೇರೆ ಯಾರಿಗೋ ಇರಿಯಲು ಹೋಗಿ ಭುವಿತ್ ಮತ್ತು ಆತನ ಗೆಳೆಯ ಹರೀಶ್ ಪೂಜಾರಿಗೇ ಇರಿದಿದ್ದಾರೆ ಎಂದು ಪೊಲೀಸರು ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.