
ಮೈಸೂರು: ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.
ಇಂದು ಬೆಳಗ್ಗೆ ವಾಯು ವಿಹಾರಕ್ಕೆ ವೇಳೆ ನಾಗೇಶ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಾಗೇಶ್ ಅವರು ಆತ್ಮಹತ್ಯೆ ಯತ್ನಿಸಿರಬಹುದು ಎಂದು ಶಂಕಿಸಲಾಗಿದೆ.
ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅವರು 2014ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ರಾಜಕೀಯ ಕ್ಷೇತ್ರದಿಂದ ದೂರವಿದ್ದ ನಾಗೇಶ್ ಪ್ರೀತಂ ಉದ್ಯಮ ನಡೆಸುತ್ತಿದ್ದರು.
Advertisement