ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು;10 ಮಂದಿಗೆ ಗಾಯ

ಲಾರಿ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿಯ...
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on: 

ಕಲಬುರಗಿ: ಲಾರಿ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ  ಎರಡು ವರ್ಷದ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿಯ ಕಣ್ಣಿಸಡಕ್‌ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಇತರ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ತೆಲಂಗಾಣ ಮತ್ತು ಬಳ್ಳಾರಿ ಮೂಲದ ಕೂಲಿ ಕಾರ್ಮಿಕರಾಗಿದ್ದು ಅಫ್ಜಲ್ ಪುರದ  ರೇಣುಕಾ ಶುಗರ್ಸ್‌ ಕಾರ್ಖಾನೆಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸಾವನ್ನಪ್ಪಿದವರನ್ನು 2 ವರ್ಷದ ಮಗು ಕೃಷ್ಣಾ, ಸವಿತಾ, ಜಯಸಿಂಗ್‌, ಸೇವಾಬಾಯಿ ಎಂದು ಗುರುತಿಸಲಾಗಿದೆ. ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com