
ಬೆಂಗಳೂರು: ಸಮಾಜಕ್ಕೆ ತಿಳಿಸಲು ಹಾಗೂ ಅವರ ಸಮಾಧಿಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡುವ ಉದ್ದೇಶದಿಂದ ರಾಜ್ಯ ಒಕ್ಕಲಿಗರ ಸಂಘದಿಂದ ನ.30ರಂದು ಮಾಗಡಿಯ ಕೋಟೆ ಮೈದಾನದಿಂದ ಕೆಂಪಾಪುರಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅಪ್ಪಾಜಿಗೌಡ ತಿಳಿಸಿದರು.
`ಎಲ್ಲರ ನಡಿಗೆ ಕೆಂಪೇಗೌಡರ ಕಡೆಗೆ' ಶೀರ್ಷಿಕೆಯಡಿ ಕೆಂಪೇಗೌಡ ಸಮಾಧಿವರೆಗೆ ಪಾದಯಾತ್ರೆ ನಡೆಯಲಿದೆ. ಬೆಳಗ್ಗೆ 10ಕ್ಕೆ ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಸ್ವಾಮಿಗಳು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಪರೂಪದ ಚಾರಿತ್ರಿಕ ವ್ಯಕ್ತಿತ್ವ ಹೊಂದಿದ್ದ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ವಿಶ್ವದ ಗಮನ ಸೆಳೆಯುತ್ತಿರುವ ಬೆಂಗಳೂರು ನಿರ್ಮಾಣವಾಗಿದೆ. ಅವರ ಜನ ಕಲ್ಯಾಣ ಕಾರ್ಯಕ್ರಮಗಳು ಇಂದಿಗೂ ಆದರ್ಶಪ್ರಾಯವಾಗಿವೆ. ಸರ್ವ ಜನಾಂಗಕ್ಕೂ ಆಶ್ರಯ ನೀಡಿ, ವಿಶ್ವ ಪಥದ ಪರಿಕಲ್ಪನೆ ತೋರಿಸಿಕೊಟ್ಟಿದ್ದಾರೆ ಎಂದರು.
Advertisement