ಕರಾವಳಿ ಕರ್ನಾಟಕದಲ್ಲಿ ಮಳೆ ಸಂಭವ

ತಮಿಳುನಾಡಿನಲ್ಲಿ ಮಳೆ ಸಂಬಂಧಿ ದುರಂತದಲ್ಲಿ ಅಸುನೀಗಿದವರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ. ಇದರ ಜತೆಗೆ ಆ ರಾಜ್ಯದ ಉಳಿದ ಭಾಗದಲ್ಲಿಯೂ ಧಾರಾಕಾರ ಮಳೆ ಮುಂದುವರಿದಿದೆ.
ಕರಾವಳಿ ಕರ್ನಾಟಕದಲ್ಲಿ ಮಳೆ ಸಂಭವ
ಕರಾವಳಿ ಕರ್ನಾಟಕದಲ್ಲಿ ಮಳೆ ಸಂಭವ
Updated on: 

ಚೆನ್ನೈ: ತಮಿಳುನಾಡಿನಲ್ಲಿ ಮಳೆ ಸಂಬಂಧಿ ದುರಂತದಲ್ಲಿ ಅಸುನೀಗಿದವರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ. ಇದರ ಜತೆಗೆ ಆ ರಾಜ್ಯದ ಉಳಿದ ಭಾಗದಲ್ಲಿಯೂ ಧಾರಾಕಾರ ಮಳೆ ಮುಂದುವರಿದಿದೆ. 2 ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಬುಧವಾರ ಎಚ್ಚರಿಕೆ ಹೊರಡಿಸಿದೆ. ಕರ್ನಾಟಕದ ಕರಾವಳಿ ಪ್ರದೇಶ, ಕೇರಳ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

 ಗುರುವಾರ ಮತ್ತೆ ಏಳು ಮಂದಿ ಅಸುನೀಗಿದ ಬಗ್ಗೆ ವರದಿಯಾಗಿದೆ. ತಿರುನಲ್ವೇಲಿ ಜಿಲ್ಲೆಯ ಪಾಪನಾಶನಂನಲ್ಲಿ 10 ಸೆಂಟಿಮೀಟರ್‍ನಷ್ಟು ಮಳೆಯಾಗಿದೆ. ರಾಮೇಶ್ವರಂ, ಚೆರ್ನಮಹಾದೇವಿಗಳಲ್ಲಿ ಮಳೆಯಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರದ ವತಿಯಿಂದ ನಷ್ಟ ಅಧ್ಯಯನ ನಡೆಸಲು ಬಂದ ತಂಡ ಸಮೀಕ್ಷಾ ಕಾರ್ಯ ಆರಂಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com