ಮೂಲಭೂತವಾದಿಗಳಿಂದಲೇ ಅಸಹಿಷ್ಣುತೆ: ಡಾ.ಪರಮೇಶ್ವರ್

ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮದಲ್ಲೂ ಮೂಲಭೂತವಾದಿಗಳಿದ್ದಾರೆ. ಈ ಮೂಲಭೂತವಾದಿಗಳೆ ದೇಶದಲ್ಲಿ...
ಬೆಂಗಳೂರಿನ ವಿಕಾಸಸೌಧದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯ ಹಾಗೂ ಹೆರಿಟೇಜ್ ಸ್ಕೂಲ್ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್.
ಬೆಂಗಳೂರಿನ ವಿಕಾಸಸೌಧದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯ ಹಾಗೂ ಹೆರಿಟೇಜ್ ಸ್ಕೂಲ್ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್.
Updated on

ಬೆಂಗಳೂರು: ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮದಲ್ಲೂ  ಮೂಲಭೂತವಾದಿಗಳಿದ್ದಾರೆ. ಈ ಮೂಲಭೂತವಾದಿಗಳೆ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಳಕ್ಕೆ ಕಾರಣವಾಗಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಕಾಸಸೌಧದಲ್ಲಿ ಗುರುವಾರ ಕ್ರೈಸ್ಟ್ ವಿಶ್ವವಿದ್ಯಾಲಯ ಹಾಗೂ ಹೆರಿಟೇಜ್ ಸ್ಕೂಲ್  ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗಿದೆ ಎಂಬ ಮಾತು  ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಕಾರಣವೇನು ಎಂದು ವಿದ್ಯಾರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ  ಉತ್ತರಿಸಿದ ಸಚಿವರು, ಬಹಳ ಒಳ್ಳೆಯ ಪ್ರಶ್ನೆ ಕೇಳಿದ್ದೀಯಾ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಎಲ್ಲ ಧರ್ಮಗಳಲ್ಲೂ ಮೂಲಭೂತವಾದಿಗಳಿದ್ದಾರೆ. ಈ ಕಾರಣದಿಂದಲೇ ದೇಶದಲ್ಲಿ ಅಸಹಿಷ್ಣುತೆ  ಹೆಚ್ಚುತ್ತಿದೆ ಎಂದರು.

ಭಾರತ ಹಲವು ಸಂಸ್ಕೃತಿ ಮತ್ತು ಧರ್ಮ, ಜಾತಿಗಳನ್ನು ಒಳಗೊಂಡಿರುವ ದೇಶ. ಅತಿ ಹೆಚ್ಚು  ಹಿಂದೂಗಳನ್ನು ಹೊಂದಿರುವ ರಾಷ್ಟ್ರ. ಹಿಂದೂ ಸೇರಿದಂತೆ ಇತರೆ ಧರ್ಮಗಳ ಒಳಗಿರುವ  ಮೂಲಭೂತವಾದಿಗಳಿಂದಾಗಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.


ಸರ್ಕಾರ ಗಂಭೀರವಾಗಿ ಪರಿಗಣಿಸಿದೆ:

ಐಸಿಸ್ ಉಗ್ರ ಸಂಘಟನೆಯೊಂದಿಗೆ ನಮ್ಮ ರಾಜ್ಯದ ಮೂವರ ನಂಟಿದೆಯೇ ಎಂಬ ಪ್ರಶ್ನೆಗೆ  ಉತ್ತರಿಸಿದ ಅವರು, ತನಿಖೆ ನಡೆಯುತ್ತಿದೆ. ಆದರೆ, ಇನ್ನೂ ಖಚಿತವಾಗಿಲ್ಲ. ಐಸಿಸ್ ವಿಷಯವನ್ನು  ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ   ಸಂದರ್ಭದಲ್ಲಿ ಯಾವುದೇ ಹೆಸರನ್ನು ಹೇಳಲಿಚ್ಚಿಸುವುದಿಲ್ಲ. ದೆಹಲಿ ಬ್ಯೂರೋ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಕೆಲವೊಂದು ಗೌಪ್ಯ ವಿಚಾರಗಳು ಇನ್ನೂ ತನಿಖಾ  ಹಂತದಲ್ಲಿರುವುದರಿಂದ ಅವುಗಳನ್ನು  ಬಹಿರಂಗಪಡಿಸಲು ಆಗುವುದಿಲ್ಲ ಎಂದು ಹೇಳಿದರು. 

ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಸರ್ಕಾರ ಪ್ರತ್ಯೇಕ ಸಮಿತಿಯೊಂದನ್ನು ರಚಿಸಿದೆ. ಇತ್ತೀಚೆಗಷ್ಟೇ ಗೃಹ ಸಚಿವ ಸ್ಥಾನ ಸ್ವೀಕರಿಸಿದ್ದು, ಮುಂದಿನ  ದಿನಗಳಲ್ಲಿ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಲಾ- ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ಗೆ ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದೆ.  ಮಾದಕ ವಸ್ತುಗಳ ಜಾಲ ಪತ್ತೆ ಹಚ್ಚಲು ವಿಶೇಷ ಕ್ರೈಂ ಬ್ರಾಂಚ್ ಇದೆ ಹಾಗೂ ಡ್ರಗ್ಸ್ ಜಾಲ ಸದೆಬಡಿಯಲು ಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ್ವೀಡನ್ ಮತ್ತು  ಗಾಪುರದಿಂದ ಆಗಮಿಸಿದ್ದ ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com