ಕಳಸಾ ಬಂಡೂರಿಗಾಗಿ ಸತ್ಯಾಗ್ರಹ

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಉತ್ತರ ಕರ್ನಾಟಕ ಭಾಗದ ರೈತರು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರೆ ದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಉತ್ತರ ಕರ್ನಾಟಕ ಭಾಗದ ರೈತರು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರೆ ದಿದೆ. ಗುರುವಾರದಿಂದ ಮಾತೆ ಮಹಾದೇವಿ, ಬಸವ ಮಂಟಪದ ಬಸವರಾಜ ದೇವರು ಮತ್ತು ರೈತ  ಸೇನಾ ಸಂಘಟನೆ ರಾಜ್ಯಾಧ್ಯಕ್ಷ  ವೀರೇಶ ಸೊಬರದಮಠ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗುರುವಾರದೊಳಗೆ ತನ್ನ ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಇದುವರೆಗೂ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿಲ್ಲ. ಬದಲಿಗೆ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವುದು ಹಾಗೂ ರೈತರ ಮೇಲೆ ಹಲ್ಲೆಗೆ ಯತ್ನಿಸುತ್ತಿದೆ. ಇಂತಹ ಯಾವುದೇ ಬೆದರಿಕೆಗಳಿಗೆ ಬಗ್ಗಿ ಪ್ರತಿಭಟನೆ ಕೈಬಿಡುವುದಿಲ್ಲ ಎಂದು
ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ದಬ್ಬಾಳಿಕೆ ನಡೆಯದು: ಕುಡಿ ಯುವ ನೀರಿಗಾಗಿ ಹೋರಾಟ ನಡೆಸಲು ನೂರಾರು ಕಿಮೀ ದೂರದಿಂದ ಮಹಿಳೆಯರು, ಮಕ್ಕಳು, ಹಗಲುರಾತ್ರಿ ಎನ್ನದೆ ಹೋರಾಟ ನಡೆಸುತ್ತಿದ್ದಾರೆ. ಇವರ ಮೇಲೆ ದಬ್ಬಾಳಿಕೆ ನಡೆಸಲು ಬಿಡುವುದಿಲ್ಲ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ಉತ್ತರ ಕರ್ನಾಟಕ ಭಾಗದಲ್ಲಿ ಎಲ್ಲಾ ರೈಲುಗಳನ್ನು ತಡೆದು ಕೇಂದ್ರ ಮತ್ತು
ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಣಯ ಕೈಗೊಳ್ಳಲಾಗಿದೆ. ಹೋರಾಟದ ವೇಳೆ ಅನಾಹುತಗಳಿಗೆ ಸಂಭವಿಸಿದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ರೈತ ಸೇನಾ ರಾಜ್ಯ ಸಂಪರ್ಕ ಪ್ರಮುಖ ಎಸ್.ಎಸ್ .ಪೂಜಾರ ಎಚ್ಚರಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ವಕೀಲ ಶರಣಪ್ಪ ಕೇಸರಪ್ಪನವರ್, ಬಿ.ಟಿ. ಸತೀಶ್, ಅರುಣೋದಯ ಕಲಾ ತಂಡ (ಗದಗ)ದ ಸದಸ್ಯರು, ಜಯ ಕರ್ನಾಟಕ ಸಂಘಟನೆ ಮುಖಂಡರು, ಕಾರ್ಯ ಕರ್ತರು ಕಳಸಾ ಬಂಡೂರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿದ ಕಾರಣ
ಸಂಚಾರ ಚಾರ ದಟ್ಟಣೆ ಉಂಟಾಗಿತ್ತು.
ರಸ್ತೆಯಲ್ಲಿ ಮಲಗಿದ ರೈತರು!
ಕಳಸಾ ಬಂಡೂರಿ ಹೋರಾಟಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಜನಪ್ರತಿನಿಧಿಯು ಸ್ಥಳಕ್ಕೆ ಆಗಮಿಸಿ ತಮ್ಮ ದೂರು ಕೇಳದಿರುವುದರಿಂದ ಕುಪಿತಗೊಂಡ ಕೆಲ ರೈತರು ಕಾಳಿದಾಸ ರಸ್ತೆಯಲ್ಲಿ ಧರಣಿ ಕುಳಿತರು. ಮಹಿಳೆ ತನ್ನ ಮಗನನ್ನು ತೊಡೆ ಮೇಲೆ ಮಲಗಿಸಿಕೊಂಡು ಕುಳಿತರೆ, ಹಲವರು ರಸ್ತೆಯಲ್ಲೇ ಮಲಗಿದರು. ಇದರಿಂದ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು, ಜನಪ್ರತಿನಿ„ಗಳ ಸ್ಥಳಕ್ಕೆ ಕರೆಸುವ ಪ್ರಯತ್ನ ನಡೆಯುತ್ತಿದೆ ಎಂದು ಮನವೋಲಿಸಲು ಯತ್ನಿಸಿದರು. ಈ ವೇಳೆ ಕೆಲ ರೈತರನ್ನು ಬಲವಂತವಾಗಿರಸ್ತೆಯಿಂದ ತೆರವುಗೊಳಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com