ಪರಿಷತ್ ಚುನಾವಣೆ ಕೈ ಹಿಡಿಯದ ಜೆಡಿಎಸ್

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತಂತೆ ಎದ್ದಿದ್ದ ಗೊಂದಲಗಳಿಗೆ ಮಾಜಿ ಪ್ರಧಾನಿ ದೇವೇಗೌಡರು ತೆರೆ ಎಳೆದಿದ್ದು, ಎರಡೂ ಪಕ್ಷಗಳು ಸ್ವತಂತ್ರವಾಗಿ ಕಣಕ್ಕಿಳಿಯಲಿವೆ...
ಮಾಜಿ ಪ್ರಧಾನಿ ದೇವೇಗೌಡ (ಸಂಗ್ರಹ ಚಿತ್ರ)
ಮಾಜಿ ಪ್ರಧಾನಿ ದೇವೇಗೌಡ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತಂತೆ ಎದ್ದಿದ್ದ ಗೊಂದಲಗಳಿಗೆ ಮಾಜಿ ಪ್ರಧಾನಿ ದೇವೇಗೌಡರು ತೆರೆ ಎಳೆದಿದ್ದು, ಎರಡೂ ಪಕ್ಷಗಳು ಸ್ವತಂತ್ರವಾಗಿ ಕಣಕ್ಕಿಳಿಯಲಿವೆ.

ಮೈತ್ರಿಗೆ ಜೆಡಿಎಸ್‍ನಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಶಾಸಕರಾದ ಚಲುವರಾಯಸ್ವಾಮಿ, ಜಮೀರ್ ಮೈತ್ರಿ ಮಾತುಕತೆಗೆ ಮುಂದಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರನ್ನು ಕೆರಳಿಸಿತ್ತು.

ಇವೆಲ್ಲದರ ಬೆನ್ನಲ್ಲೇ, ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎನ್ನುವ ಮೂಲಕ ಮೈತ್ರಿ ಮರಿದು ಬಿದ್ದಿರುವುದನ್ನು ದೇವೇಗೌಡ ಖಚಿತಪಡಿಸಿದ್ದಾರೆ. ಮೈತ್ರಿಗೆ ಜೆಡಿಎಸ್ ಒಪ್ಪದ ಹಿನ್ನೆಲೆ ಯಲ್ಲಿ ಕಾಂಗ್ರೆಸ್ ಕೆಲ ಕಠಿಣ ಕ್ಷೇತ್ರ ಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಅನಿವಾರ್ಯತೆಗೆ ಸಿಲುಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com