ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಕಡೆಗೂ ಮರು ಚಾಲನೆ ಸಿಕ್ಕಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಕಡೆಗೂ ಮರು ಚಾಲನೆ ಸಿಕ್ಕಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. 9,511 ಪ್ರಾಥಮಿಕ ಶಾಲಾ (ಕಿರಿಯ ಮತ್ತು ಹಿರಿಯ) ಶಿಕ್ಷಕರ ನೇಮಕಾತಿಗಾಗಿ ಪ್ರಕ್ರಿಯೆ ನಡೆದಿದ್ದು, ಇದೀಗ ಮುಂದಿನ ಹಂತ ತಲುಪಿದೆ. 1:1 ಅನುಪಾತದಲ್ಲಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇಲಾಖೆಯ
ವೆಬ್‍ಸೈಟ್‍ನಲ್ಲಿ schooleducation.kar.nic.in ವೀಕ್ಷಿಸಬಹುದು.

ಹಿರಿಯ ಪ್ರಾಥಮಿಕ ಶಾಲಾ (6ರಿಂದ 8ನೇ ತರಗತಿ) ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟಿಸುವಾಗ ಇಂಗ್ಲಿಷ್ ವಿಷಯದಲ್ಲಿ ಒಂದು ವರ್ಷದ ಡಿಪ್ಲಮಾ ಮಾಡಿರುವ 154 ಅಭ್ಯರ್ಥಿಗಳನ್ನು ಪರಿಗಣಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದು ದಾಖಲಾತಿ ಪರಿಶೀಲನೆಗೆ ಹಾಜರಾಗಿದ್ದ ಈ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವರ್ಷದ ಇಂಗ್ಲಿಷ್ ಕೋರ್ಸ್ ಮಾಡಿರುವವರನ್ನು ಪರಿಗಣಿಸಬಾರದು ಎಂದು ಸೂಚಿಸಿದ್ದ ಹೈಕೋರ್ಟ್, 2003ರ ಶಿಕ್ಷಕರ ನೇಮಕಾತಿ ಸಂಬಂಧದ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರದ್ದುಗೊಳಿಸಿತ್ತು. ಇದೇ ಕಾರಣಕ್ಕಾಗಿ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ವಿಳಂಬವಾಗಿತ್ತು. ಇದೀಗ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಆಯ್ಕೆ ಪಟ್ಟಿಯ ಬಗ್ಗೆ ಯಾವುದಾದರೂ ಆಕ್ಷೇಪಣೆಗಳಿದ್ದರೆ ಡಿಸೆಂಬರ್ 3ರರೊಳಗೆ ಸೂಕ್ತ ದಾಖಲೆಗಳೊಂದಿಗೆ ಕೇಂದ್ರೀಯ ದಾಖಲಾತಿ ಘಟಕದ (ಸಿಎಸಿ) ವಿಶೇಷ ಅಧಿಕಾರಿಗೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಪಟ್ಟಿ ಪ್ರಕಟಗೊಳ್ಳುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com