

ಬೆಂಗಳೂರು: ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ 200 ಮೆಗಾವ್ಯಾಟ್ ನೀಡುವುದಾಗಿ ಘೋಷಿಸಿದೆ.
ರಾಜ್ಯದ ವಿದ್ಯುತ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪತ್ರ ಬರೆದು ಹೆಚ್ಚಿನ ವಿದ್ಯುತ್ ಬೇಡಿಕೆಯನ್ನು ಮಂಡಿಸಿತ್ತು. ಹಾಲಿ ಕರ್ನಾಟಕಕ್ಕೆ ಹಂಚಿಕೆಯಾಗುವ ಕೇಂದ್ರದ ಪಾಲಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ನೀಡುವಂತೆ ಕೋರಿತ್ತಲ್ಲದೇ, ವಿದ್ಯುತ್ ಸಮಸ್ಯೆ ಬಿಗಡಾಯಿಸಿದ್ದನ್ನು ವಿವರಿಸಿತ್ತು.