ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸಲಹೆ ನೀಡಿದರು. ನಗರದ ಪುರಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಕ್ಕೆಬಂದಂತಹ ಗ್ರಾಮೀಣ ಜನತೆ ಇಲ್ಲೇ ಬೀಡು ಬಿಡುತ್ತಿದ್ದು, ಹಳ್ಳಿ ಜೀವನವನ್ನು ಮರೆ ಯುತ್ತಿದ್ದಾರೆ ಎಂದರು. ಹೆಣ್ಣು ಮಕ್ಕಳಿಗೆ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಿದರೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಾಧ್ಯ. ಹೆಣ್ಣೊಂದು ಕಲಿತರೆ ಕುಟುಂಬಕ್ಕೆ ಶಿಕ್ಷಣ ನೀಡಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಪೋಷಕರು ಹೆಚ್ಚು ಆದ್ಯತೆ ನೀಡುವಂತೆ ತಿಳಿಸಿದರು. 25 ವರ್ಷ ಪೂರೈಸಿರುವ ಮಹಿಳಾ ಸಂಘದ ಕುರಿತು ಶ್ಲಾಘನೆ ವ್ಯಕ್ತಪಡಿಸಿದ ಕಾಗೋಡು ತಿಮ್ಮಪ್ಪ ಅವರು, ವಿದ್ಯಾವಂತ ಮಹಿಳೆಯರು ಸಂಘದ ಬಗ್ಗೆ ಆಸಕ್ತಿ ವಹಿಸಿದರೆ ಸಮಾಜದ ಹೆಣ್ಣುಮಕ್ಕಳು ಮತ್ತಷ್ಟು ಸಬಲರಾಗಲು ಸಾಧ್ಯ. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಸಮಾಜದ ಬಾಲಕಿ ಯರ ವಿದ್ಯಾರ್ಥಿನಿಲಯವಿದ್ದು, ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಅಕ್ಷರ ಕಲಿಯುವತ್ತ ಹೆಜ್ಜೆ ಇಡಬೇಕಿದೆ ಎಂದು ಸಲಹೆ ನೀಡಿದರು. ಶಾಸಕ ಮಧು ಬಂಗಾರಪ್ಪ ಮಾತನಾಡಿ, ರಾಜ್ಯದಲ್ಲಿ 18 ಲಕ್ಷ ಈಡಿಗ ಸಮು ದಾಯದವರಿದ್ದು, ರಾಜಕೀಯವಾಗಿ ಮುಂದೆ ಬರಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಅವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ವೈಯಕ್ತಿಕವಾಗಿ ರು.50 ಸಾವಿರ ಧನಸಹಾಯ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಸಮಾಜಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷೆ ನಳಿನಾಕ್ಷಿ ಸಣ್ಣಪ್ಪ, ಶಾಸಕ ಮಾಲೀಕಯ್ಯ ಗುತ್ತೇದಾರ, ಉಪಾಧ್ಯಕ್ಷ ಎಂ. ತಿಮ್ಮೇಗೌಡ, ಮಾಜಿ ಸಚಿವ ಹಾಲಪ್ಪ ಉಪಸ್ಥಿತರಿದ್ದರು.