ಬೆಂಗಳೂರು: ಮಹದಾಯಿ ಜಲ ವಿವಾದ ಸಂಬಂಧ ಮಂಗಳವಾರದೊಳಗಾಗಿ ನ್ಯಾಯಾಧಿಕರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಪೂರ್ಣಗೊಳಿಸಿದೆ.
ವಿಧಾನ ಮಂಡಲ ಅಧಿವೇಶನದ ಕೊನೆ ದಿನ ಇನ್ನು ಮೂರು ದಿನಗಳೊಳಗಾಗಿ ಮಧ್ಯಂತರ ಅರ್ಜಿ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬರದ ಸಿದ್ಧತೆ ನಡೆಸಿದ ಜಲಂಪನ್ಮೂಲ ಹಾಗೂ ಕಾನೂನು ಇಲಾಖೆ ಅಧಿಕಾರಿಗಳು ಅರ್ಜಿಯ ಕರಡನ್ನು ಸಿದ್ದಪಡಿಸಿ ರಾಜ್ಯದ ಪರ ವಕೀಲ ಪಾಲಿ ಎಸ್.ನಾರೀಮನ್ ಅವರ ಒಪ್ಪಿಗೆ ಪಡೆದುಕೊಂಡಿದ್ದಾರೆ.
ಒಟ್ಟು 7 ಟಿಎಂಸಿ ನೀರಿಗಾಗಿ ಮಧ್ಯಂತರ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಸೋಮವಾರವೇ ಈ ಪ್ರಕ್ರಿಯೆಗೆ ಚಾಲನೆ ದೊರೆಯುತ್ತದೆ. ಒಂದು ವೇಳೆ ಸೋಮವಾರ ಸಾಧ್ಯವಾಗದೇ ಇದ್ದರೆ ಮಂಗಳವಾರವಂತೂ ಅರ್ಜಿ ಸಲ್ಲಿಕೆಯಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.