ಅಂಕೋಲಾ ಬಳಿ ಭೀಕರ ಅಪಘಾತ, ಆರು ಸಾವು

ಟಿಪ್ಪರ್ ಡಿಕ್ಕಿಯಾಗಿ ಮಾರುತಿ ಓಮ್ನಿಯಲ್ಲಿದ್ದ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ಬಳಿ ಸಂಭವಿಸಿದೆ.
ಅಂಕೋಲಾ ಬಳಿ ಭೀಕರ ಅಪಘಾತ
ಅಂಕೋಲಾ ಬಳಿ ಭೀಕರ ಅಪಘಾತ

ಕಾರವಾರ: ಟಿಪ್ಪರ್ ಡಿಕ್ಕಿಯಾಗಿ ಮಾರುತಿ ಓಮ್ನಿಯಲ್ಲಿದ್ದ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ಬಳಿ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಈ ಅಪಘಾತ ಸಂಭವಿಸಿದ್ದು, ಓಮ್ನಿ ವ್ಯಾನ್‌ನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರೆಲ್ಲರೂ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದವರಾಗಿದ್ದು, ಕಾರವಾರದಿಂದ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಅಂಕೋಲಾ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com