ಮುಕ್ತ ವಿವಿ ಪದವಿ ಲೆಕ್ಕಕ್ಕಿಲ್ಲ: ಹೈಕೋರ್ಟ್'ನಿಂದ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ

ವಸತಿ ಶಾಲೆಗಳ ಪ್ರಾಂಶುಪಾಲರ ಹುದ್ದೆಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‍ಒಯು)ದಿಂದ ಪಡೆದಿರುವ ಪದವಿ ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಲೋಕಾಸೇವಾ ಆಯೋಗ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ಆಕ್ಷೇಪಣೆ...
ಹೈ ಕೋರ್ಟ್, ಕರ್ನಾಟಕ (ಸಂಗ್ರಹ ಚಿತ್ರ)
ಹೈ ಕೋರ್ಟ್, ಕರ್ನಾಟಕ (ಸಂಗ್ರಹ ಚಿತ್ರ)

ಬೆಂಗಳೂರು: ವಸತಿ ಶಾಲೆಗಳ ಪ್ರಾಂಶುಪಾಲರ ಹುದ್ದೆಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‍ಒಯು)ದಿಂದ ಪಡೆದಿರುವ ಪದವಿ ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಲೋಕಾಸೇವಾ ಆಯೋಗ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ತುರ್ತು ನೋಟಿಸ್ ಜಾರಿ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರಿದ್ದ ಏಕಸದಸ್ಯ ಪೀಠ, ವಿಶ್ವವಿದ್ಯಾಲಯ ಧನ ಸಹಯೋಗ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹಾಗೂ
ಕೆಪಿಎಸ್ಸಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೆ ನೋಟಿಸ್ ಜಾರಿ ಮಾಡಿದೆ.

2014ರಿಂದ ಲೇ ಕೆಎಸ್‍ಒಯುನಲ್ಲಿ ಪದವಿ ಪಡೆದವರ ಮಾನ್ಯತೆ ಪರಿಗಣಿಸುವುದನ್ನು ನಿಲ್ಲಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಸುತ್ತೋಲೆ ಹೊರಡಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com