200 ಕೋಟಿ ನಷ್ಟ

ಟೋಲ್ ಮುಕ್ತ ರಾಷ್ಟ್ರವನ್ನಾಗಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಟೋಲ್ ಮುಕ್ತ ರಾಷ್ಟ್ರವನ್ನಾಗಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಲಾರಿ ಮೋಟಾರ್ ಟ್ರಾನ್ಸ್ ಪೋರ್ಟ್ ರಾಷ್ಟ್ರವ್ಯಾಪಿ ಕರೆ ನೀಡಿರುವ ಮುಷ್ಕರ ಬುಧವಾರ ಮಧ್ಯರಾತ್ರಿಯಿಂದಲೇ ಆರಂಭವಾಗಿದ್ದು, ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಕೈಜೋಡಿಸಿದೆ. ಹಾಗಾಗಿ ರಾಜ್ಯದಲ್ಲಿ ಲಾರಿ, ಟ್ಯಕ್, ಗೂಡ್ಸ್ ವಾಹನ ಸೇರಿದಂತೆ ಸುಮಾರು 9 ಲಕ್ಷ ವಾಹನಗಳು ಸಂಚಾರ ಸ್ಥಗಿತಗೊಳಿಸಿವೆ. ಆದರೆ, ಹಾಲು, ಹಣ್ಣು- ತರಕಾರಿ, ಪೆಟ್ರೋಲ್, ಡೀಸೆಲ್ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಸುವ ಲಾರಿಗಳ ಸಂಚಾರ ಎಂದಿನಂತೆ ಸಾಗಿದೆ. ಹಾಗಾಗಿ ಮೊದಲ ದಿನ ಸಾರ್ವಜನಿಕರಿಗೆ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ. ಬೇಡಿಕೆ ಪರಿಗಣಿಸುವ ಬಗ್ಗೆ ಮುಷ್ಕರ ನಿರತ ಲಾರಿ ಮಾಲೀಕರು ಕೇಂದ್ರಕ್ಕೆ ಎರಡು ದಿನಗಳ ಕಾಲ  ಗಡುವು ನೀಡಿದ್ದಾರೆ.ಅಕ್ಟೋಬರ್ 2ರಂದು ಗಾಂಧಿ ಜಯಂತಿ, ನಂತರ ವಾರದ ಕೊನೆ ದಿನ ಹಾಗೂ ಭಾನುವಾರ ರಜೆ ಇರುವ ಕಾರಣ ಎರಡು ದಿನಗಳ ಕಾಲ ಗಡುವು ನೀಡಲಾಗಿದೆ.

200 ಕೋಟಿ ನಷ್ಟ: ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ, ರಾಜ್ಯಾದ್ಯಂತ ಸುಮಾರು 9 ಲಕ್ಷ ಸರಕು-ಸಾಗಣೆ ಲಾರಿಗಳು ಸಂಚಾರ ಸ್ಥಗಿತಗೊಳಿಸಿವೆ. 1.62 ಲಕ್ಷ ಕಚೇರಿಗಳು ಮುಚ್ಚಿವೆ. ಇದರಿಂದ ಒಂದೇ ದಿನ ರಾಜ್ಯ ಸರ್ಕಾರದ ಬೊಕ್ಕಸಕ್ಕೆ  200 ಕೋಟಿ ನಷ್ಟವಾಗಿದೆ. ಇನ್ನಾದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಎಚ್ಚೆತ್ತುಕೊಂಡು ಬೇಡಿಕೆಗಳ ಬಗ್ಗೆ ಗಮನಹರಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com