ರಾಘವೇಶ್ವರ ಶ್ರೀ ಪ್ರಕರಣ ವಿವರ ಕೇಳಿದ ರಾಜ್ಯಪಾಲ

ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ...
ರಾಘವೇಶ್ವರ ಭಾರತಿ
ರಾಘವೇಶ್ವರ ಭಾರತಿ

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ರಾಜ್ಯ ಸರ್ಕಾರದಿಂದ ವಿವರಣೆ ಕೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಈ ಬಗ್ಗೆ ಸುಳಿದಾಡುತ್ತಿದ್ದ ಸುದ್ದಿಯನ್ನು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ದೃಢಪಡಿಸಿದ್ದಾರೆ. ಇದರೊಂದಿಗೆ ರಾಘವೇಶ್ವರ ಶ್ರೀಗಳ ಪ್ರಕರಣದಲ್ಲಿ ರಾಜಭವನದ ಮಧ್ಯಪ್ರವೇಶವೂ ಆದಂತಾಗಿದೆ.

ಆದರೆ ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ವಿಭಿನ್ನ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಘವೇಶ್ವರ ಶ್ರೀಗಳ ಪ್ರಕರಣ ಕುರಿತು ರಾಜ್ಯಪಾಲರು ಸರ್ಕಾರದಿಂದ ಮಾಹಿತಿ ಕೇಳಿದ್ದಾರೆ. ನಾವು ಕೊಡುತ್ತೇವೆ ಎಂದರು.

ಮಾಹಿತಿ ಇಲ್ಲ: ಸಚಿವ ಜಾರ್ಜ್
ರಾಘವೇಶ್ವರ ಶ್ರೀಗಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖಾ ಪ್ರಗತಿ ಬಗ್ಗೆ ವರದಿ ಕೇಳಿರುವ ಬಗ್ಗೆ ಅಧಿಕೃತಕವಾಗಿ ತಮಗೆ ಯಾವುದೇ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪಾಲರಿಂದ ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣದ ಬಗ್ಗೆ ರಾಜ್ಯಪಾಲರು ಸಿಎಂ ಜೊತೆ ಚರ್ಚಿಸಿರಬಹುದು. ಪ್ರಕರಣದ ವರದಿ ಕೇಳಿದರೆ ಸರ್ಕಾರ ರಾಜ್ಯ ಪಾಲರಿಗೆ ವರದಿ ಸಲ್ಲಿಸಲಿದೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com